ದೇಶದಲ್ಲೇ ಶೀಘ್ರವಾಗಿ ಕೊರೊನಾ ಲಸಿಕೆ ತಯಾರಿ ಹೆಮ್ಮೆಯ ವಿಚಾರ- ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಜನವರಿ 4,2021(www.justkannada.in):  ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ಸವಾಲೊಡ್ಡಿ ನಮ್ಮ ದೇಶದಲ್ಲೇ ಶೀಘ್ರವಾಗಿ ಕೊರೊನಾ ಲಸಿಕೆ ಆವಿಷ್ಕಾರ ಮಾಡಿದ್ದು, ಇದು ಭಾರತೀಯರಿಗೆ ಹೆಮ್ಮೆಯ ವಿಚಾರ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.jk-logo-justkannada-mysore

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಲಸಿಕೆ ಆವಿಷ್ಕಾರಕ್ಕಾಗಿ ಶ್ರಮವಹಿಸಿದ ವಿಜ್ಞಾನಿಗಳು ಮತ್ತು ಪ್ರೋತ್ಸಾಹಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದಿಸುತ್ತೇನೆ. ಅಭಿವೃದ್ಧಿ ರಾಷ್ಟ್ರಗಳಿಗೆ ಸವಾಲೊಡ್ಡಿ ನಮ್ಮದೇ ಆದ ಕೊರೊನಾ ಲಸಿಕೆ ಕಂಡುಹಿಡಿಯಲಾಗಿದೆ. ಈ ಲಸಿಕೆಯನ್ನು ಮೊದಲಿಗೆ ಕೊರೊನಾ ಯೋಧರಿಗೆ ನೀಡಬಹುದು ಎಂಬ ಅಭಿಪ್ರಾಯ ಇದೆ. 3 ನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆದ ಬಳಿಕ ಅಂತಿಮವಾಗಿ ಪರವಾನಗಿ ದೊರೆಯಬಹುದು. ನಾನು ಕೂಡ ಸಂಬಂಧಪಟ್ಟ ವಿಜ್ಞಾನಿಗಳೊಂದಿಗೆ ಮಾತನಾಡಿದ್ದು, ಇದು ಯಶಸ್ವಿಯಾದ ಲಸಿಕೆ ಹಾಗೂ ಯಾವುದೇ ಅಡ್ಡ ಪರಿಣಾಮ ಇಲ್ಲ ಎಂದು ತಿಳಿದುಬಂದಿದೆ. ಇದು ವಿಶ್ವಕ್ಕೆ ಭಾರತೀಯರ ಕೊಡುಗೆ ಎಂದರು.

ಸರ್ಕಾರಿ ವ್ಯವಸ್ಥೆಯಡಿ ಲಸಿಕೆ ವಿತರಣೆ ಮಾಡಲು ಸಿದ್ಧತೆ ಪೂರ್ಣಗೊಂಡಿದೆ. ಖಾಸಗಿ ಆಸ್ಪತ್ರೆಗಳ ಸಹಕಾರ ಬೇಕಿದ್ದರೆ ಅದನ್ನೂ ಪಡೆಯುವ ಬಗ್ಗೆ ಚಿಂತಿಸಲಾಗುವುದು. ಯುನೈಟೆಡ್ ಕಿಂಗ್ ಡಮ್ ನಿಂದ ಬಂದವರು ಮತ್ತು ಅವರ ಸಂಪರ್ಕಿತರಲ್ಲಿ ಒಟ್ಟು 48 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಪೈಕಿ 34 ಮಂದಿ ಯು.ಕೆ.ಯಿಂದ ಹಿಂದಿರುಗಿದವರಾಗಿದ್ದಾರೆ. ಇವರೆಲ್ಲರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, 10 ಮಂದಿಯಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್ ಪತ್ತೆಯಾಗಿದೆ. ಇವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಯಾರಿಗೂ ರೋಗ ತೀವ್ರವಾಗಿ ಕಾಡಿಲ್ಲ ಎಂದರು.

ಯು.ಕೆ.ಯಿಂದ ಹಿಂದಿರುಗಿದವರಲ್ಲಿ 75 ಮಂದಿಯ ಸಂಪರ್ಕ ಪತ್ತೆಯಾಗಿಲ್ಲ. ಇದನ್ನು ಬೇಗನೆ ಪತ್ತೆ ಮಾಡಿ ಎಂದು ಬಿಬಿಎಂಪಿ ಹಾಗೂ ಗೃಹ ಇಲಾಖೆಗೆ ಕೋರಲಾಗಿದೆ. 75 ರಲ್ಲಿ ಮೂವರು ಮಾತ್ರ ವಿದೇಶಿ ವಿಳಾಸ ಹೊಂದಿದ್ದಾರೆ. ಕೆಲ ವಿದೇಶಿ ಪ್ರಜೆಗಳ ಪಾಸ್ ಪೋರ್ಟ್ ನಲ್ಲಿ ಮಾಹಿತಿ ಕೊರತೆ, ಸಿಮ್ ಸಮಸ್ಯೆಯಿಂದಾಗಿ ಸಂಪರ್ಕ ಪತ್ತೆಯಾಗದೇ ಇರಬಹುದು ಎಂದು ಸ್ಪಷ್ಟಪಡಿಸಿದರು.

proud-fastest-coronavirus-vaccine-country-minister-dr-k-sudhakar
ಕೃಪೆ -internet

ಕೇಂದ್ರ ಸರ್ಕಾರ ಎಲ್ಲ ವಿಚಾರಗಳನ್ನು ಪರಿಶೀಲಿಸಿ ಸರಿಯಾದ ನಿರ್ಣಯ ಕೈಗೊಂಡಿದೆ. ವಿಮಾನ ಹಾರಾಟಕ್ಕೆ ಸಂಬಂಧಿಸಿದಂತೆಯೂ ಮಾರ್ಗಸೂಚಿ ಇದೆ ಎಂದು ತಿಳಿಸಿದರು.

Key words: Proud – fastest- coronavirus- vaccine – country-Minister -Dr. K. Sudhakar