ಗ್ರಾಮೀಣ ಮತ್ತು ನಗರ ಪ್ರದೇಶ ಜನತೆಗೆ ಸಿಹಿಸುದ್ಧಿ: 5 ಲಕ್ಷ ಮನೆ ನಿರ್ಮಾಣಕ್ಕೆ ನಿರ್ಧಾರ.

ಬೆಂಗಳೂರು,ಜುಲೈ,22,2021(www.justkannada.in): ಗ್ರಾಮೀಣ ಮತ್ತು ನಗರ ಪ್ರದೇಶ ಗುಡ್ ನ್ಯೂಸ್ ಸಿಕ್ಕಿದ್ದು, 5 ಲಕ್ಷ ಮನೆ ನಿರ್ಮಾಣಕ್ಕೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.jk

ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಗ್ರಾಮೀಣ ಪ್ರದೇಶದಲ್ಲಿ 4 ಲಕ್ಷ ಮನೆ ನಿರ್ಮಾಣ, ನಗರ ಪ್ರದೇಶದಲ್ಲಿ 1 ಲಕ್ಷ ಮನೆ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಸುಮಾರು 8 ಸಾವಿರ ಕೋಟಿ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡುತ್ತೇವೆ. ಪ್ರತಿಯೊಂದು ಗ್ರಾಮ ಪಂಚಾಯತ್ ಸಭೆ ಮೂಲಕ ಮನೆ ನಿರ್ಮಿಸುತ್ತೇವೆ. ನಗರ ಪ್ರದೇಶದಲ್ಲಿ ಆಸರೆ ಸಮಿತಿ ಮೂಲಕ ಮನೆ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. 2 ವರ್ಷದಲ್ಲಿ ಒಟ್ಟು 5 ಲಕ್ಷ ಮನೆ ನಿರ್ಮಾಣಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ.  ಹಣಕಾಸು ಇಲಾಖೆಯೊಂದಿಗೆ ಚರ್ಚೆ ನಡೆಸಿಯೇ ತೀರ್ಮಾನ ಕೈಗೊಳ್ಳಲಾಗಿದೆ ಎಂದು  ಮಾಹಿತಿ ನೀಡಿದರು.

ಸದ್ಯ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಹೈಕಮಾಂಡ್ ನಿರ್ಧಾರದಂತೆ ನಡೆಯಲಿದ್ದಾರೆ ಎಂದು ತಿಳಿಸಿದರು.

Key words: provide -rural – urban- cabinet meeting-Decision – build- 5 lakh houses