ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದಲೇ ವಿದ್ಯಾರ್ಥಿ ವೇತನ ನೀಡಲು ನಿರ್ಧಾರ.

ಬೆಂಗಳೂರು,ಡಿಸೆಂಬರ್,29,2023(www.justkannada.in): ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು,  ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದ್ದ ವಿದ್ಯಾರ್ಥಿ ವೇತನವನ್ನ ರಾಜ್ಯ ಸರ್ಕಾರವೇ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.

ರಾಜ್ಯದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಲಾಗಿತ್ತು. ಹೀಗಾಗಿ ಈವರೆಗೆ ವಿದ್ಯಾರ್ಥಿ ವೇತನ ನೀಡಲಾಗಿರಲಿಲ್ಲ. ಈ ಕುರಿತು ಇಂದು ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಇದನ್ನು ಭರಿಸಲು ತೀರ್ಮಾನಿಸಿದೆ.  6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದೆ. ಆಯವ್ಯಯದಲ್ಲಿ 60 ಕೋಟಿ ರೂ. ನಿಗದಿಯಾಗಿದ್ದು, ಇಲಾಖೆಗೆ ಲಭ್ಯ ಅನುದಾನದಲ್ಲಿಯೇ ಮರುಹಂಚಿಕೆ ಮಾಡಿ ಹೆಚ್ಚುವರಿ 40 ಕೋಟಿ ಭರಿಸಲು ಸೂಚನೆ ನೀಡಿದರು.

ಇನ್ನು ಇದೇ ವೇಳೆ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ  ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Key words: provide -scholarships – minority community –students-state government