ತಂತ್ರಜ್ಞಾನದ ಮೂಲಕ ಆರೋಗ್ಯಸೇವೆಗಳ ಪೂರೈಕೆ ಸಾಧ್ಯ:-ಸಚಿವ ಅಶ್ವತ್ ನಾರಾಯಣ್

ಬೆಂಗಳೂರು,ಡಿಸೆಂಬರ್,9,2021(www.justkannada.in) ಸಮರ್ಥ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಾರ್ವಜನಿಕ ಮತ್ತು ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಆಯುಷ್ ಪದ್ಧತಿಯ ಮುಖಾಂತರ ಜನರಿಗೆ ತಲುಪಿಸಬಹುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್ ಹೇಳಿದ್ದಾರೆ.

ಆಯುಷ್ ಪದ್ಧತಿಯ ಮೂಲಕ ಸಾರ್ವಜನಿಕ ಮತ್ತು ಪ್ರಾಥಮಿಕ ಆರೋಗ್ಯ ಸೇವೆಗಳ ಪೂರೈಕೆ’ ಕುರಿತು ಏರ್ಪಡಿಸಲಾಗಿದ್ದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ `ಜಿಜ್ಞಾಸಾ’ದಲ್ಲಿ ಸಚಿವ ಅಶ್ವಥ್ ನಾರಾಯಣ್ ಗುರುವಾರ ಮಾತನಾಡಿದರು.

ಕೋವಿಡ್ ನಂತರದ ಪರಿಸ್ಥಿತಿಯು ಜಗತ್ತನ್ನು ಭೌತಿಕವಾಗಿ ದೂರವಿಟ್ಟಿದ್ದು, ಎಲ್ಲವೂ ವರ್ಚುಯಲ್ ಆಗಿವೆ. ಆದರೆ, ಈ ರೂಪವು ಹೆಚ್ಚು ಪರಿಣಾಮಕಾರಿ ಎನ್ನುವುದು ಕೂಡ ಈಗ ಸಾಬೀತಾಗಿದೆ. ಸಮಸ್ಯೆಗಳಿಗೆ ಹೆದರದೆ ನಾವು ಅವುಗಳನ್ನು ಎದುರಿಸಿ, ಸರಿಯಾದ ಪರಿಹಾರಗಳನ್ನು ಕಂಡುಹಿಡಿಯಬೇಕು ಎಂದು ಅವರು ಹೇಳಿದರು.

ಆಯುಷ್ ಪದ್ಧತಿಯಲ್ಲಿನ ಚಿಕಿತ್ಸೆಗಳ ಮೂಲಕ ಮನುಷ್ಯನ ಆರೋಗ್ಯವನ್ನು ಹೇಗೆ ಪರಿಪೂರ್ಣವಾಗಿ ಕಾಪಾಡಬಹುದು ಎನ್ನುವುದು ನಮ್ಮ ಪ್ರಾಚೀನ ವಿಜ್ಞಾನದಲ್ಲಿ ಇದೆ. ಈಗ ತಂತ್ರಜ್ಞಾನವನ್ನು ಸದ್ಬಳಕೆ ಮಾಡಿಕೊಂಡು, ಸಮಗ್ರ ಬೆಳವಣಿಗೆಯ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕು ಎಂದು ಸಚಿವ ಅಶ್ವಥ್ ನಾರಾಯಣ್ ಸೂಚಿಸಿದರು.

ತಂತ್ರಜ್ಞಾನದ ಮೂಲಕ ನಾವು ಇಡೀ ಜಗತ್ತನ್ನು ತಲುಪಬಹುದು. ಇದರಲ್ಲಿ ಮುಂಚೂಣಿಯಲ್ಲಿರುವುದೇ ಕರ್ನಾಟಕ ರಾಜ್ಯದ ಮತ್ತು ಬೆಂಗಳೂರಿನ ಶಕ್ತಿಯಾಗಿದೆ. ಆಯುಷ್ ಪದ್ಧತಿಯ ಮೂಲಕ ಇಡೀ ಜಗತ್ತು ಭಾರತದ ಕಡೆಗೆ ನೋಡುವಂತೆ ಮಾಡಬೇಕು ಎಂದು ಸಚಿವ ಅಶ್ವಥ್ ನಾರಾಯಣ್ ನುಡಿದರು.

ಕಾರ್ಯಕ್ರಮದಲ್ಲಿ ಹೆಸರಾಂತ ವೈದ್ಯ ಡಾ.ಗಂಗಾಧರ್, ಡಾ.ಸಿ.ಎನ್. ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.

Key words: provision – health services- through -technology – possible-Minister -Ashwath Narayan

ENGLISH SUMMARY…

Technology enables effective delivery of Health services: Dr.C.N.Ashwatha Narayana

Bengaluru: Primary health services for people can be effectively delivered through the Ayush system by using the appropriate technologies, Dr.C.N.Ashwatha Narayana, Minister for Higher Education and IT/BT, said on Thursday.

Speaking in the inaugural session of ‘JIGNASA-2021’, an international conference on ‘Delivery of Public and Primary Health Services’, he told, we need to find solutions to the challenges by making the best use of available technology.

“The Post-COVID situation has made the world lean towards becoming virtual and it has been also proved effective. Technology would enable us to reach any corner of the world. We are in an advantageous situation as the state in general (Karnataka) and Bengaluru, in particular, are at the forefront of technological development. We can make the entire world look towards India through the Ayush system,” Narayana opined.

“There lies a knowledge in our ancient science about attaining overall health through treatments of Ayush system. Now, modern technology can be made use of to cater to the health needs and to develop a holistic outlook”, he told.

Dr.Gangadhar, a well-known doctor, Dr.C.N.Patil, and others attended.