‘ಪಿಎಸ್‌ಐ, ಸಿಟಿಐ’ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ಅಕ್ರಮ ನಡೆದಿದ್ದರೆ ಕಠಿಣ ಕ್ರಮ -ಗೃಹ ಸಚಿವ ಜಿ. ಪರಮೇಶ್ವರ್

ಬೆಂಗಳೂರು,ಜನವರಿ,20,2024(www.justkannada.in): ಪಿ.ಎಸ್‌.ಐ.ಮತ್ತು ಸಿಟಿಐ ಪರೀಕ್ಷೆ ಪತ್ರಿಕೆ ಲೀಕ್ ಮಾಡಿರುವ ಆರೋಪ ಕೇಳಿ ಬಂದಿದೆ. ಇಂಟೆಲಿಜೆನ್ಸ್ ವಿಭಾಗದಲ್ಲಿ ಸಬ್ ಇನ್ಸ್‌ ಪೆಕ್ಟ‌ರ್ ಆಗಿ ಕಾರ್ಯನಿರ್ವಹಿಸುತ್ತಿರುವ ಲಿಂಗಯ್ಯ ಎಂಬ ಅಧಿಕಾರಿ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ ಎಂದು ಅರೋಪ ಕೇಳಿ ಬಂದಿದೆ.

545 ಪಿಎಸ್‌ ಐ ಹುದ್ದೆ ಸಿಟಿಐ ಕೆಪಿಎಸ್‌ ಸಿ ನಡೆಸುತ್ತಿರುವ ಪರೀಕ್ಷೆ ಇದಾಗಿದೆ. ಇತ್ತ ಲಿಂಗಯ್ಯ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಹಾಗೂ ವಾಟ್ಸಪ್ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೂರಾರು ಪರೀಕ್ಷಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಮಾಡಿದ್ದಾರೆ.

 ಪಿಎಸ್‌ ಐ ಸಿಟಿಐ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಿಸಿಬಿ ತನಿಖೆ ನಡೆಯುತ್ತಿದೆ ಅಕ್ರಮ ಆಗಿದ್ದರೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ಇಂದು ಮಾತನಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಬೆಂಗಳೂರಿಗೆ ಕೇಂದ್ರದಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ಮಾಡುತ್ತಿದ್ದೇವೆ. ಪಿಎಸ್‌ಐ ಲಿಂಗಯ್ಯ ಗುಪ್ತರ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಮಧ್ಯೆ ಗುಪ್ತಚರ ಇಲಾಖೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಮಾಹಿತಿ ಪಡೆಯುವಾಗ ಆಡಿಯೋ ಬೆಳಕಿಗೆ ಬಂದಿದೆ ಮಾಹಿತಿ ಕಲೆ ಹಾಕಲು ಫೇಕ್ ಆಡಿಯೋ ಮಾಡಿದ್ದೆ ಅಂತ ಹೇಳಿದ್ದಾರೆ ಆಡಿಯೋ ಸತ್ಯಾವೋ ಅಲ್ಲವೋ ಎಂಬುದರ ಬಗ್ಗೆ ಸಿಸಿಬಿ ತನಿಖೆ ಮಾಡುತ್ತಿದೆ. ಮುಂಜಾಗ್ರತಾ ಕ್ರಮ ಕೈಗೊಂಡು ಪಿಎಸ್‌ಐ ನೇಮಕ ಪರೀಕ್ಷೆ ಮಾಡುತ್ತೇವೆ ಎಂದು ತಿಳಿಸಿದರು.

Key words: PSI, CTI- question paper- leak -Strict action – Home Minister- G. Parameshwar