Tuesday, September 22, 2026

BDA Apartments

ಪಿಎಸ್ ಐ ಪರಶುರಾಮ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ-ಗೃಹ ಸಚಿವ ಡಾ.ಜಿ.ಪರಮೇಶ್ವ...
Home Front Page ಪಿಎಸ್ ಐ ಪರಶುರಾಮ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ-ಗೃಹ ಸಚಿವ ಡಾ.ಜಿ.ಪರಮೇಶ್ವರ್

ಪಿಎಸ್ ಐ ಪರಶುರಾಮ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ-ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೊಪ್ಪಳ, ಆಗಸ್ಟ್​​​,7,2024 (www.justkannada.in): ಅನುಮಾನಸ್ಪದವಾಗಿ ಸಾವನ್ನಪ್ಪಿದ ಯಾದಗಿರಿ ಪಿಎಸ್​ಐ ಪರಶುರಾಮ್ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಪರಶುರಾಮ್ ಹಾಗೆಯೇ ಪತ್ನಿಗೆ ಇಲಾಖೆಯಲ್ಲಿ ಸೂಕ್ತವಾದ ಕೆಲಸ ಕೊಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಘೋಷಣೆ ಮಾಡಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಂದು  ಮೃತ ಪಿಎಸ್​ಐ ಪರಶುರಾಮ್ ಅವರ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.ಪಿಎಸ್ ಐ ಪರಶುರಾಮ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ parashuram

ಬಳಿಕ ಮಾತನಾಡಿದ ಅವರು, ಪರಶುರಾಮ್ ಅವರ ಅನುಮಾನಾಸ್ಪದ ಸಾವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪರಶುರಾಮ್ ಪತ್ನಿಗೆ ಇಲಾಖೆಯಲ್ಲಿ ಸೂಕ್ತವಾದ ಕೆಲಸ ಕೊಡುತ್ತೇವೆ. ಶಾಸಕ ಮತ್ತು ಅವರ ಪುತ್ರನ ಮೇಲೆ ಆರೋಪ ಮಾಡಿದ್ದಾರೆ. ಈ ಸಂಬಂಧ ತನಿಖೆಗೆ ಆದೇಶ ಮಾಡಲಾಗಿದೆ. ಆರೋಪ ಕೇಳಿ ಬಂದ ದಿನವೇ ಸಿಐಡಿ ತನಿಖೆಗೆ ಪ್ರಕರಣವನ್ನು ನೀಡಿದ್ದೇವೆ. ಅದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು.

ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಲ್ಲ. ಸಿಬಿಐಗೆ ನೀಡುವ ಅರ್ಹತೆ ಈ ಪ್ರಕರಣದಲ್ಲಿ ಇಲ್ಲ. ಆದರೆ ಕುಟುಂಬಕ್ಕೆ ನ್ಯಾಯ ದೊರಕಿಸುವ ಕೆಲಸ ಮಾಡುತ್ತೇವೆ ಎಂದು  ಪರಮೇಶ್ವರ್ ತಿಳಿಸಿದರು.

Key words: PSI Parashuram,  family, 50 lakhs, Minister, Parameshwar