ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ: 26 ಮಂದಿ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು.

ಕಲ್ಬುರ್ಗಿ,ಜನವರಿ,5,2023(www.justkannada.in):  ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಮಂದಿ ಆರೋಪಿಗಳಿಗೆ ಕಲ್ಬುರ್ಗಿ ಜಿಲ್ಲಾ ಸತ್ರನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದಿವ್ಯಾ ಹಾಗರಗಿ , ಮಂಜುನಾಥ್ ಮೇಳಕುಂದಿ , ಡಿವೈಎಸ್ಪಿ ಮಲ್ಲಿಕಾರ್ಜುನ ಸೇರಿ 26 ಮಂದಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಕಲ್ಬುರ್ಗಿ ಜಿಲ್ಲಾ ಸತ್ರ ನ್ಯಾಯಾಲಯದಿಂದ ನ್ಯಾಯಾಧೀಶರಾದ ಕೆ.ಬಿ ಪಾಟೀಲ್ ಆದೇಶಿಸಿದ್ದಾರೆ.

Key words: PSI- Recruitment- Illegal –Case-Conditional bail – 26 accused.