ಪಿಎಸ್ ಐ ಹಗರಣ: ಸಾಕ್ಷಿ ಸಿಕ್ಕರೇ ಮುಲಾಜಿಲ್ಲದೆ ಬಂಧನ- ಗೃಹ ಸಚಿವ ಅರಗ ಜ್ಞಾನೇಂದ್ರ.

ಶಿವಮೊಗ್ಗ,ಮೇ,21,2022(www.justkannada.in):  ಪಿಎಸ್ ಐ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ಸಿಕ್ಕರೇ ಮುಲಾಜಿಲ್ಲದೆ ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಅರಗ ಜ್ಞಾನೇಂದ್ರ, ಪಿಎಸ್ ಐ ನೇಮಕಾತಿ ಹಗರಣದ ಬಗ್ಗೆ  ತನಿಖೆ ನಡೆಯುತ್ತಿದೆ. ಪಿಎಸ್ ಐ ಮರು ಪರೀಕ್ಷೆಗೆ ದಿನಾಂಕ ನಿಗದಿಯಾಗಿಲ್ಲ ಶೀಘ್ರದಲ್ಲೇ ದಿನಾಂಕ ಮರು ನಿಗದಿ ಮಾಡುತ್ತೇವೆ ಎಂದರು.

ಗೃಹ ಸಚಿವ ಅರಗ ಜ್ಞಾನೇಂದ್ರ ಇಂದು ಶಿವಮೊಗ್ಗದ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.  ಬಾಪೂಜಿನಗರ,ವಿದ್ಯಾನಗರ ಗಣಪತಿ ಲೇಔಟ್ ಸೇರಿ ಹಲವು ಪ್ರದೇಶಗಳಿಗೆ ಭೇಟಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಗೃಹ ಸಚಿವರಿಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸಾಥ್ ನೀಡಿದ್ದಾರೆ.

Key words: PSI-scam-witness – detention-Home Minister- Araga Jnanendra.