Monday, September 14, 2026

BDA Apartments

ಪಿಯುಸಿ, ಪದವಿ ವಿದ್ಯಾರ್ಥಿಗ’ಳಿಗೆ ಉಚಿತ ಶಿಕ್ಷಣ: ಸಿಎಂ ಬೊಮ್ಮಾಯಿ ಮತ್ತೊಮ್ಮ...
Home Front Page ಪಿಯುಸಿ, ಪದವಿ ವಿದ್ಯಾರ್ಥಿಗ’ಳಿಗೆ ಉಚಿತ ಶಿಕ್ಷಣ: ಸಿಎಂ ಬೊಮ್ಮಾಯಿ ಮತ್ತೊಮ್ಮೆ ಪುನರುಚ್ಚಾರ

ಪಿಯುಸಿ, ಪದವಿ ವಿದ್ಯಾರ್ಥಿಗ’ಳಿಗೆ ಉಚಿತ ಶಿಕ್ಷಣ: ಸಿಎಂ ಬೊಮ್ಮಾಯಿ ಮತ್ತೊಮ್ಮೆ ಪುನರುಚ್ಚಾರ

ಬೆಂಗಳೂರು, ಮಾರ್ಚ್ 22, 2023 (www.justkannada.in): ರಾಜ್ಯದ ಪಿಯುಸಿ, ಪದವಿ ವಿದ್ಯಾರ್ಥಿಗ’ಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಹೌದು, ರಾಜ್ಯದ ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಈ ಬಾರಿ ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸರ್ಕಾರಿ ಪಿಯು, ಡಿಗ್ರಿ ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಇನ್ನು ಮುಂದೆ ಶುಲ್ಕವಿಲ್ಲದೇ ಪ್ರವೇಶ ಪಡೆಯಬಹುದು ತಿಳಿಸಿದ್ದಾರೆ.