ಗುಡಿಸಲುಗಳ ಮೇಲೆ ಕುಸಿದುಬಿದ್ದ ಗೋಡೆ: 15 ಜನರ ಧಾರುಣ ಸಾವು

0
319

ಪುಣೆ: ಜೂ-29:(www.justkannada.in) ಗುಡಿಸಲುಗಳ ಮೇಲೆ ಸುಮಾರು 60 ಅಡಿಯ ಗೋಡೆ ಕುಸಿದು ಬಿದ್ದ ಪರಿಣಾಮ 15 ಮಂದಿ ಸಾವಿಗೀಡಾಗಿರುವ ಘಟನೆ ಪುಣೆಯ ಕೊಂಧ್ವಾ ಪ್ರದೇಶದಲ್ಲಿರುವ ತಲಾಬ್​ ಮಸೀದಿ ಬಳಿ ನಡೆದಿದೆ.

ಇಂದು ಮುಂಜಾನೆ ಸಂಭವಿಸಿದ ಈ ದುರಂತದಲ್ಲಿ ಸ್ಥಳದಲ್ಲೇ 12 ಜನ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಧ್ಯದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 15ಕ್ಕೆ ಏರಿದೆ. ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ನಾಲ್ಕಕ್ಕೂ ಹೆಚ್ಚು ಜನ ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದ್ದು, ಘಟನಾ ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ.

ಮೃತರಲ್ಲಿ 10 ಪುರುಷರು, ಓರ್ವ ಮಹಿಳೆ ಹಾಗೂ ನಾಲ್ಕು ಮಕ್ಕಳು ಎಂದು ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಅಗ್ನಿಶಾಮಕ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ, ಮೃತರ ಗುರುತು ಇನ್ನು ಪತ್ತೆಯಾಗಬೇಕಿದೆ.

ಗುಡಿಸಲುಗಳ ಮೇಲೆ ಕುಸಿದುಬಿದ್ದ ಗೋಡೆ: 15 ಜನರ ಧಾರುಣ ಸಾವು
Pune,15 dead,wall collapses, in Kondhwa area