ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದ ಅಂತ್ಯಕ್ರಿಯೆ: ಅಪ್ಪ-ಅಮ್ಮನ ಬಳಿ ಮಲಗಿದ ಅಪ್ಪು

ಬೆಂಗಳೂರು, ಅಕ್ಟೋಬರ್ 31, 2021 (www.justkannada.in): ಕೋಟ್ಯಂತರ ಅಭಿಮಾನಿಗಳನ್ನು ರಂಜಿಸಿ, ನೂರಾರು ಜನರ ಪಾಲಿಗೆ ಆಶಾಕಿರಣವಾಗಿದ್ದ ನಟ ಅಪ್ಪು ಇನ್ನು ನೆನಪು ಮಾತ್ರ…

ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಕುಟುಂಬ ಸದಸ್ಯರು ಹಾಗೂ ಲಕ್ಷಾಂತರ ಅಭಿಮಾನಿಗಳ ಕಣ್ಣೀರಿನ ನಡುವೆ ಇಂದು ನಡೆಯಿತು.

ಈಡಿಗ ಸಮುದಾಯದ ಸಂಪ್ರದಾಯದಂತೆ ಅಂತಿಮ ಧಾರ್ಮಿಕ ವಿಧಿ ವಿಧಾನ ನಡೆಸಲಾಯಿತು. ಸಿದ್ಧತೆ ಸಮಾಧಿ ಸೇರಿದ ಅಪ್ಪು..ದೃಶ್ಯ ನೋಡುತ್ತಲೇ ಕಣ್ಣೀರಿಟ್ಟು ಶಿವಣ್ಣ ಗೋಳಾಡಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಶ್ರೀ, ಸಿದ್ಧರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ ಸೇರಿದಂತೆ ಕೆಲ ಸಚಿವರು ಈ ವೇಳೆ ಉಪಸ್ಥಿತರಿದ್ದರು.