ಬೆಂಗಳೂರು ಅರಮನೆ ಮೈದಾನದಲ್ಲಿಂದು ‘ಪುನೀತ್ ನಮನ’ ಕಾರ್ಯಕ್ರಮ.

ಬೆಂಗಳೂರು,ನವೆಂಬರ್,16,2021(www.justkannada.in):  ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ ವುಡ್ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಚಿತ್ರರಂಗದ ಪರವಾಗಿ ನಮನ ಸಲ್ಲಿಸುವ ಉದ್ದೇಶದಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಇಂದು ‘ಪುನೀತ ನಮನ’ ಕಾರ್ಯಕ್ರಮ ಆಯೋಜಿಸಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಕಾರ್ಯಕ್ರಮ ಆರಂಭವಾಗಲಿದ್ದು, ದಕ್ಷಿಣ ಭಾರತದ ಖ್ಯಾತ ಕಲಾವಿದರು, ರಾಜಕೀಯ ನಾಯಕರು ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

ಡಾ.ರಾಜ್​ ಕುಮಾರ್ ಕುಟುಂಬ ಭಾಗಿಯಾಗಲಿದ್ದು, ಶಿವರಾಜ್​ ಕುಮಾರ್​ , ರಾಘವೇಂದ್ರ ರಾಜ್​ ಕುಮಾರ್  ಹಾಗೂ ಅವರ ಕುಟುಂಬದವರು ‘ಪುನೀತ ನಮನ’ದಲ್ಲಿ ಉಪಸ್ಥಿತರಿರಲಿದ್ದಾರೆ. ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದ್ದು, 2000 ಜನ ಭಾಗವಹಿಸುವ ನಿರೀಕ್ಷೆ ಇದೆ.

ಕನ್ನಡ ಚಿತ್ರರಂಗದ ಎಲ್ಲಾ ಗಣ್ಯರು ಭಾಗವಹಿಸಬೇಕು ಎಂಬ ಉದ್ದೇಶದಿಂದ ಇಂದು, ಚಿತ್ರ ಪ್ರದರ್ಶನ ಹೊರತುಪಡಿಸಿ, ಚಿತ್ರೋದ್ಯಮದ ಮತ್ತೆಲ್ಲಾ ಕೆಲಸಗಳಿಗೆ ರಜೆ ಘೋಷಿಸಲಾಗಿದೆ.

ಕಾರ್ಯಕ್ರಮದ ಪ್ರಾರಂಭದಲ್ಲಿ ಹಾಡಿನ ಮೂಲಕ ಅಪ್ಪುಗೆ ಗೀತ ನಮನ ಸಲ್ಲಿಸಲಾಗುತ್ತದೆ. ಅಪ್ಪು ಸಿನಿಮಾ ಜರ್ನಿ ಮತ್ತು ಸಾಮಾಜಿಕ ಎರಡೂ ವಿಚಾರಗಳನ್ನ ಸೇರಿಸಿ 5 ನಿಮಿಷದ ಹಾಡನ್ನು ತಯಾರಿಸಲಾಗಿದೆ. ಹಲವು ಗಾಯಕ, ಗಾಯಕಿಯರು ವೇದಿಕೆ ಮೇಲೆ ಅಪ್ಪು ಹಾಡುಗಳ ಹಾಡುವ ಮೂಲಕ ನಮನ ಸಲ್ಲಿಸಲಿದ್ದಾರೆ. ವೇದಿಕೆ ಮೇಲೆ ಯಾವುದೇ ಕುರ್ಚಿಗಳು ಇರುವುದಿಲ್ಲ ಬದಲಾಗಿ, ಕೇವಲ ಎಲ್ ಇ ಡಿ ವಾಲ್ ಇರಲಿದೆ. 10 ನಿಮಿಷಗಳ ಕಾಲ ಅಪ್ಪು ಜರ್ನಿಯ ಬಗ್ಗೆ ಎವಿ ಮಾಡಲಾಗಿದೆ.

ಗಾಯಕರಾದ ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್, ಸಾಧು ಕೋಕಿಲ, ಮಂಜುಳಾ ಗುರುರಾಜ್, ಹೇಮಂತ್, ಅನುರಾಧಾ ಭಟ್, ಸುನಿತಾ, ಇಂದು ನಾಗರಾಜ್, ಚೈತ್ರಾ, ಶಮಿತಾ ಮಲ್ನಾಡ್‌ ಸ್ವರಾಭಿಷೇಕ ನಡೆಸಿಕೊಡಲಿದ್ದಾರೆ.

ಆದ್ದರಿಂದಲೇ ಕನ್ನಡದ ಎಲ್ಲಾ ನಟರು ಆಗಮಿಸುವ ನಿರೀಕ್ಷೆ ಇದೆ. ಸುದೀಪ್, ಯಶ್, ಗಣೇಶ್, ಉಪೇಂದ್ರ, ರವಿಚಂದ್ರನ್, ಶ್ರೀಮುರಳಿ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಧ್ರುವ ಸರ್ಜಾ ಸೇರಿದಂತೆ‌ ಕನ್ನಡದ ಎಲ್ಲಾ ಕಲಾವಿದರು ಭಾಗಿ ಆಗಲಿದ್ದಾರೆ.

ದಕ್ಷಿಣ ಭಾರತ ಚಿತ್ರರಂಗದ ಸ್ಟಾರ್ ​ಗಳಾದ ನಟ ವಿಶಾಲ್, ರಜನಿಕಾಂತ್, ದಳಪತಿ ವಿಜಯ್, ಅಜಿತ್, ವಿಜಯ್ ಸೇತುಪತಿ, ಚಿರಂಜೀವಿ, ಅಲ್ಲು ಅರ್ಜುನ್, ಜ್ಯೂ. ಎನ್​ಟಿಆರ್, ಪ್ರಭಾಸ್, ರಾಮ್ ಚರಣ್, ಮೋಹನ್ ಲಾಲ್ ಸೇರಿದಂತೆ ಪ್ರಮುಖ ಕಲಾವಿದರು ಭಾಗವಹಿಸುವ ಸಾಧ್ಯತೆ ಇದೆ.

Key words: Punith Namana – Bangalore -Palace –grounds

ENGLISH SUMMARY….

‘Puneeth Namana’ program at Bengaluru Palace grounds today
Bengaluru, November 16, 2021 (www.justkannada.in): The Karnataka Film Chamber of Commerce (KFCC) has organized ‘Puneeth Namana’ program at the Bengaluru Palace grounds today to pay homage to Sandalwood’s power star Puneeth Rajkumar, who died of cardiac arrest on October 29.
The program will begin at 3.00 pm at the Gayathri Vihar grounds. Several big names of the South Indian film industry and political leaders and other dignitaries are expected to take part in the program. About 2000 people are expected to participate in the program. Only pass holders will be allowed to enter the premises.
South Indian film superstars Vishal, Rajanikanth, Vijay, Ajit, Vijay Sethupathi, Chiranjeevi, Allu Arjun, Junior NTR, Prabhas, Ram Charan, Mohanlal, and others are expected to attend the program.
Keywords: Puneeth Namana/ Palace grounds/ todya