ಜೈಲಿನಿಂದ ಪಂಜಾಬ್ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಬಿಡುಗಡೆ.

ಪಟಿಯಾಲ,ಏಪ್ರಿಲ್,1,2023(www.justkannada.in): ವೃದ್ಧರೊಬ್ಬರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಪಂಜಾಬ್ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಇಂದು ಬಿಡುಗಡೆಯಾಗಿದ್ದಾರೆ.

ಪಟಿಯಾಲ ಜೈಲಿನಿಂದ ನವಜೋದತ್  ಸಿಂಗ್ ಸಿಧು ಬಿಡುಗಡೆಯಾಗಿದ್ದಾರೆ . 1988 ರ ಡಿಸೆಂಬರ್ 27 ರಂದು  ಪಟಿಯಾಲದಲ್ಲಿ ವ್ಯಕ್ತಿಯೊಬ್ಬರ ಮೇಲೆ  ಹಲ್ಲೆಗೈದು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ, ನವಜೋತ್‌ ಸಿಂಗ್‌ ಸಿಧು ಒಂದು ವರ್ಷದ ಜೈಲುಶಿಕ್ಷೆಗೆ ಗುರಿಯಾಗಿದ್ದರು. ಇದೀಗ 10 ತಿಂಗಳ ಬಳಿಕ ಪಟಿಯಾಲ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

1988ರಲ್ಲಿ ಕೋಪದ ಭರದಲ್ಲಿ ಹಿರಿಯ ನಾಗರಿಕರೊಬ್ಬರ ಮೇಲೆ ತೀವ್ರ ಹಲ್ಲೆ ಮಾಡಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಆ ವ್ಯಕ್ತಿ, ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು. ಬಳಿಕ ಪೊಲೀಸರು ನವಜೋತ್‌ ಸಿಧು ಮತ್ತು ಅವರ ಸ್ನೇಹಿತರ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿತ್ತು.

Key words: Punjab -Congress –unit- Former president – Navjot Singh Sidhu- released- jail.