ಹೈರಿಸ್ಕ್ ರಾಜ್ಯದಿಂದ ಬಂದವರಿಗೆ ಕ್ವಾರಂಟೈನ್ ಕಡ್ಡಾಯ- ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ.

 ಬೆಂಗಳೂರು,ಆಗಸ್ಟ್,2,2021(www.justkannada.in):  ನೆರೆಯ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೋನಾ ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೊರೋನಾ ತಡೆಗಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಮಧ್ಯೆ ಹೈರಿಸ್ಕ್ ರಾಜ್ಯದಿಂದ ಬಂದವರಿಗೆ ಕ್ವಾರಂಟೈನ್ ಕಡ್ಡಾಯವಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.

ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ಈ ಕುರಿತು ಮಾತನಾಡಿರುವ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ, ಹೈರಿಸ್ಕ್ ರಾಜ್ಯದಿಂದ ಬಂದವರು ಬಿಬಿಎಂಪಿ ಸೂಚಿಸಿದ ಸ್ಥಳದಲ್ಲಿ ಕಡ್ಡಾಯವಾಗಿ ಕ್ವಾರಂಟೈನ್ ಆಗಬೇಕು. ಕ್ವಾರಂಟೈನ್ ಕೇಂದ್ರದಲ್ಲಿ ಕೊರೋನಾ ಟೆಸ್ಟ್ ಮಾಡಲಾಗುವುದು. ಕೋವಿಡ್ ನೆಗೆಟಿವ್ ರಿಪೋರ್ಟ್ ಬಂದರೆ ಮಾತ್ರ ಮನೆಗೆ ವಾಪಸ್ ಕಳಿಸಲಾಗುತ್ತದೆ ಎಂದು ತಿಳಿಸಿದರು.

ಕೊರೋನಾ ತಡೆಗೆ ಕಠಿಣ ನಿಯಮ  ಜಾರಿ ಮಾಡಲಾಗುತ್ತದೆ. ಕಂಟೈನ್ ಮೆಂಟ್ ಜೋನ್ ಗಳಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೌರವ್ ಗುಪ್ತ ತಿಳಿಸಿದರು,

Key words: Quarantine – compulsory – high risk –state- Gaurav Gupta-Chief Commissioner -BBMP.