ಬೆಂಗಳೂರು, ಮೇ, 9,2025 (www.justkannada.in): ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಹೀಗಾಗಿ ಇದನ್ನು ಎನ್‌ಐಎಗೆ ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ . ಕಾಂಗ್ರೆಸ್ ಸರ್ಕಾರ ಇಂತಹವರ ವಿಚಾರದಲ್ಲಿ ಮೃದು ಧೋರಣೆ ತಾಳಿದೆ. . ಪಾಕಿಸ್ತಾನ ಜಿಂದಾಬಾದ್ ಘೋಷಣೆಗೆ, ಭಯೋತ್ಪಾದನೆ ಚಟುವಟಿಕೆಗೆ ಪ್ರೇರಣೆ ಕೊಡುವವರ ಸಂಪರ್ಕ ಇವರಿಗಿದೆ. ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿದರು.
ಇಂದು ರಾಜ್ಯಪಾಲ ಥಾವರ್ ಚಂದ್ ಅವರನ್ನ ಬಿಜೆಪಿ ನಾಯಕರು ಭೇಟಿಯಾಗಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನ ಎನ್ ಐಎಗೆ ವಹಿಸುವಂತೆ ಮನವಿ ಮಾಡಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕೊಲೆಯ ಬಗ್ಗೆ ವಿವರಿಸಲಾಗಿದೆ. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಪಾರಿ ನೀಡಿರುವ ಪ್ರಕರಣ. ಮುಸ್ಲಿಂ ಹುಡುಗನ ಕೊಲೆಯಾಗಿದ್ದಕ್ಕೆ ಆ ಕುಟುಂಬಕ್ಕೆ ಕಾಂಗ್ರೆಸ್ 25 ಲಕ್ಷ ರೂ. ಪರಿಹಾರ ನೀಡಿದ್ದು, ಆ ಹಣವನ್ನು ಬಳಸಿಯೇ ಸುಪಾರಿ ನೀಡಲಾಗಿದೆ. ಪಾಕಿಸ್ತಾನ ಜಿಂದಾಬಾದ್ ಎಂದು ಹೇಳುವವರಿಗೆ ಆಪರೇಶನ್ ಸಿಂಧೂರದಂತೆಯೇ ಶಾಸ್ತಿ ಆಗಬೇಕಿದೆ. ಇದಕ್ಕೆ ಅಂತ್ಯ ಕಾಣಿಸಬೇಕಿದೆ. ಇದಕ್ಕಾಗಿ ಪ್ರಕರಣವನ್ನು ಎನ್‌ಐಎ ಗೆ ವಹಿಸಬೇಕು ಎಂದು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ತಿಳಿಸಿದರು.
Key words: Pakistan, connection, coastal area, R. Ashok