ಬೆಂಗಳೂರು,ಜುಲೈ,21,2025 (www.justkannada.in): ಮುಡಾ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರೆಯಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.
ಇಡಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದ ವಿಚಾರ ಕುರಿತು ಮಾತನಾಡಿದ ಆರ್.ಅಶೋಕ್, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅಕ್ರಮವಾಗಿ ಹಂಚಿಕೆಯಾಗಿದ್ದ 14 ಸೈಟ್ ವಾಪಸ್ ಕೊಟ್ಟರು. ನಮ್ಮ ಹೋರಾಟದ ಫಲವಾಗಿ ವಾಪಸ್ ಕೊಟ್ಟಿದ್ದಾರೆ. ತಪ್ಪು ಮಾಡಿಲ್ಲ ಅಂದ್ರೆ ಸಿಎಂ ಯಾಕೆ ಸೈಟ್ ವಾಪಸ್ ನೀಡಿದರು. ಸುಪ್ರೀಂಕೋರ್ಟ್ ನಲ್ಲಿ ಏನಾಗಿದೆ ಅಂತಾ ಚರ್ಚಿಸಲು ಹೋಗಲ್ಲ. ಹೋರಾಟ ಮುಂದುವರೆಸುತ್ತೇವೆ ಎಂದರು.
ಮುಡಾ ಹಗರಣ ಸಂಬಂಧ ಹೈಕೋರ್ಟ್ ಆದೇಶ ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿ ಇಡಿಯನ್ನ ರಾಜಕೀಯ ಹೋರಾಟಕ್ಕೆ ಬಳಸಿಕೊಳ್ಳಬೇಡಿ ಎಂದು ಕೇಂದ್ರ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿತ್ತು.
Key words: BJP, Muda, issue, R. Ashok