ಬೆಂಗಳೂರು,ಆಗಸ್ಟ್,5,2025 (www.justkannada.in): ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗೆ ನಮ ಬೆಂಬಲ ಇದೆ. ನೌಕರರ ಸಮಸ್ಯೆ ಪರಿಹರಿಸಿ, ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ ಎಂದು ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ಸಾರಿಗೆ ನೌಕರರಿಗೆ ವೇತನ ಕೊಡಲು ಸಾಧ್ಯವಾಗದ ಪಾಪರ್ ಹಂತಕ್ಕೆ ಬಂದಿದೆ. ನಮ ಸರ್ಕಾರದ ಖಜಾನೆ ತುಂಬಿದೆ ಎಂದು ಬೊಬ್ಬೆ ಹೊಡೆಯುತ್ತೀರಿ. ನಾನು ಸಾರಿಗೆ ಮಂತ್ರಿಯಾಗಿದ್ದಾಗ ನೌಕರರ ಶೇ.15 ರಷ್ಟು ವೇತನವನ್ನು ಹೆಚ್ಚಳ ಮಾಡಿದ್ದೆ. 4 ಲಕ್ಷ ಕೋಟಿಗೂ ಅಧಿಕ ಬಜೆಟ್ ಮಂಡನೆ ಮಾಡುವ ನಿಮಗೆ ಅವರ ಬೇಡಿಕೆ ಈಡೇರಿಸಲು ಸಾಧ್ಯವಾಗುತ್ತಿಲ್ಲವೇ? ಎಂದು ಕಿಡಿಕಾರಿದರು.
ಇಡೀ ದೇಶವೇ ಕೋವಿಡ್ ವೇಳೆ ಆರ್ಥಿಕವಾಗಿ ತತ್ತರಿಸಿತ್ತು. ಅಂತ ಸಂದರ್ಭದಲ್ಲೂ ನಮ ಸರ್ಕಾರ ಸಾರಿಗೆ ನೌಕರರಿಗೆ ಸಂಕಷ್ಟದ ಸಂದರ್ಭದಲ್ಲೂ ಅರ್ಧ ವೇತನವನ್ನು ನೀಡಿತ್ತು. ಎಲ್ಲವೂ ಸರಿಯಾಗಿರುವಾಗ ಬೇಡಿಕೆ ಈಡೇರಿಸಲು ಏಕೆ ಸಾಧ್ಯವಾಗುತ್ತಿಲ್ಲ? ಎಂದು ಪ್ರಶ್ನಿಸಿದರು.
Key words: problem, transport employees, government, R. Ashok