ಬೆಂಗಳೂರು,ಡಿಸೆಂಬರ್,15,2025 (www.justkannada.in) ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನವನ್ನು ಒಂದು ವಾರಗಳ ಕಾಲ ವಿಸ್ತರಿಸುವಂತೆ ಸ್ಪೀಕರ್ ಯುಟಿ ಖಾದರ್ ಅವರಿಗೆ ವಿಪಕ್ಷ ನಾಯಕ ಆರ್.ಅಶೋಕ್ ಮನವಿ ಮಾಡಿ ಪತ್ರ ಬರೆದಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಆರ್.ಅಶೋಕ್, ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆಯಾಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕು ಎಂದು ಮನವಿ ಮಾಡಿದ್ದಾರೆ.
ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ 19 ರವರೆಗೆ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು. ಕಾರಣಾಂತರಗಳಿಂದ ಎರಡು ದಿನ ಮೊಟಕುಗೊಂಡಿದೆ. ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಅಧಿವೇಶವನ್ನು ಒಂದು ವಾರ ವಿಸ್ತರಿಸಬೇಕೆಂದು ಮನವಿ ಮಾಡಿದ್ದಾರೆ.
Key words: R. Ashok, Speaker, extension, winter session







