Wednesday, November 4, 2026

Dasara Wishes

ಪ್ರತಿ ಟನ್ ಕಬ್ಬಿಗೆ 5500 ರೂ. ನಿಗದಿಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ: ಸುವರ್ಣ...
Happy Dasara
Home Front Page ಕರ್ನಾಟಕಕ್ಕೆ ಮಾರಿ: ಕೇರಳಕ್ಕೆ ಉಪಕಾರಿ- ರಾಜ್ಯ ಸರ್ಕಾರದ ವಿರುದ್ದ ಆರ್.ಅಶೋಕ್ ಆಕ್ರೋಶ

ಕರ್ನಾಟಕಕ್ಕೆ ಮಾರಿ: ಕೇರಳಕ್ಕೆ ಉಪಕಾರಿ- ರಾಜ್ಯ ಸರ್ಕಾರದ ವಿರುದ್ದ ಆರ್.ಅಶೋಕ್ ಆಕ್ರೋಶ

ಬೆಂಗಳೂರು,ಡಿಸೆಂಬರ್,11,2024 (www.justkannada.in): ಕೇರಳದ ವಯನಾಡಿನಲ್ಲಿ ನೆರೆ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್,   ಕೇರಳಕ್ಕೆ ಉಪಕಾರಿ; ಕರ್ನಾಟಕಕ್ಕೆ ಮಾರಿ ಎಂದು ಕಿಡಿಕಾರಿದ್ದಾರೆ.

ಭ್ರಷ್ಟಾಚಾರದ ಕಳಂಕ ಮೆತ್ತಿಕೊಂಡು, ಭಂಡತನದಿಂದ ಖುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಸಿಎಂ ಸಿದ್ದರಾಮಯ್ಯನವರ ಸರ್ಕಾರ, ಹೈಕಮಾಂಡ್ ನಾಯಕರನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ.

ಅಕಾಲಿಕ ಮಳೆಯಿಂದ ಬೆಳೆ ಹಾನಿಗೊಳಗಾಗಿ ಸಂಕಷ್ಟದಲ್ಲಿರುವ ರೈತತರಿಗೆ ಪರಿಹಾರ ಕೊಡಲು ಹಣವಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿಯಿಂದ ಸಾವನ್ನಪ್ಪಿರುವ ಬಾಣಂತಿ ಮಹಿಳೆಯರ ಕುಟುಂಬಗಳಿಗೆ ಪರಿಹಾರ ಕೊಟ್ಟಿಲ್ಲ. ಬೆಂಗಳೂರಿನ ಉದ್ದಗಲಕ್ಕೂ ಬಾಯ್ತೆರೆದಿರುವ ರಸ್ತೆಗುಂಡಿ ಮುಚ್ಚಲು ಹಣವಿಲ್ಲ. ಆದರೆ ಹೈಕಮಾಂಡ್ ನಾಯಕರನ್ನು ಓಲೈಸಲು ಕೇರಳದಲ್ಲಿ ಮನೆ ನಿರ್ಮಿಸಿಕೊಡಲು ಹೊರಟಿದೆ ಈ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

Key words: Kerala, R. Ashok, against, state government