Sunday, September 20, 2026

BDA Apartments

ಎಲ್ಲವನ್ನೂ ಕಾಮಾಲೆ ಕಣ್ಣಿನಿಂದ ನೋಡುವ ಸಿದ್ದರಾಮಯ್ಯ: ಆರ್.ಅಶೋಕ್ ಟೀಕೆ BDA JK_Adv B...
Home Front Page ಎಲ್ಲವನ್ನೂ ಕಾಮಾಲೆ ಕಣ್ಣಿನಿಂದ ನೋಡುವ ಸಿದ್ದರಾಮಯ್ಯ: ಆರ್.ಅಶೋಕ್ ಟೀಕೆ

ಎಲ್ಲವನ್ನೂ ಕಾಮಾಲೆ ಕಣ್ಣಿನಿಂದ ನೋಡುವ ಸಿದ್ದರಾಮಯ್ಯ: ಆರ್.ಅಶೋಕ್ ಟೀಕೆ

ಬೆಂಗಳೂರು, ಜನವರಿ 30, 2022 (www.justkannada.in): ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲವನ್ನೂ ಕಾಮಾಲೆ ಕಣ್ಣಿನಿಂದ ನೋಡುತ್ತಾರೆ ಎಂದು ಸಚಿವ ಆರ್.ಅಶೋಕ್ ಟೀಕಿಸಿದ್ದಾರೆ.

ಸರ್ಕಾರದ ಆರು ತಿಂಗಳ ಸಾಧನೆಗಳ ಬಗ್ಗೆ ಟೀಕೆ ಮಾಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯನವರಿಗೆ ಎಲ್ಲದಕ್ಕೂ ಮಾತನಾಡುವ ಚಟ ಇದೆ. ನಾನು ಮಾಡಿದ್ದೇ ನಿಜ, ಬೇರೆಯವರು ಮಾಡಿದ್ದು ಸುಳ್ಳು ಅನ್ನುವ ಮಾನಸಿಕ ಸ್ಥಿತಿಗೆ ಅವರು ಹೋಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ನಮ್ಮ ಸರ್ಕಾರ ಎಲ್ಲ ವರ್ಗಗಳಿಗೂ, ಎಲ್ಲಾ ವಲಯಗಳಿಗೂ ಆದ್ಯತೆ ನೀಡಿ ಅಭಿವೃದ್ಧಿ ಮಾಡಿದೆ. ಬೆಂಗಳೂರಿಗೆ ಮುಖ್ಯಮಂತ್ರಿಯವರು 6 ಸಾವಿರ ಕೋಟಿ ರೂ. ಕೊಟ್ಟಿದ್ದಾರೆ ಎಂದು ಅಶೋಕ್ ಹೇಳಿದ್ದಾರೆ.