ಸಾಮಾಜಿಕ ಭದ್ರತಾ ಪಿಂಚಣಿ ನೀಡಲೂ ಹಣವಿಲ್ಲದ ಶೋಚನೀಯ ಪರಿಸ್ಥಿತಿಯಲ್ಲಿ ಸರ್ಕಾರ- ಆರ್.ಅಶೋಕ್ ಟೀಕೆ.

ಬೆಂಗಳೂರು, ಫೆಬ್ರವರಿ, 20,2024(www.justkannada.in): ಸಾಮಾಜಿಕ ಭದ್ರತಾ ಯೋಜನೆ ಅಡಿಯಲ್ಲಿ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ವಿಧವಾ ವೇತನ, ಮಾಶಾಸನ ನೀಡಲಾಗುತ್ತಿದ್ದು , ಆದರೆ ಕಳೆದ ಐದಾರು ತಿಂಗಳುಗಳಿಂದ ಸಿಎಂ ತವರು ಜಿಲ್ಲೆಯಲ್ಲಿ  ಫಲಾನುಭವಿಗಳಿಗೆ ಇದು ತಲುಪಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್,   ರಾಜ್ಯದ ಬೊಕ್ಕಸ ಬರಿದಾಗಿಲ್ಲ, ರಾಜ್ಯದ ಖಜಾನೆ ಖಾಲಿಯಾಗಿಲ್ಲ ಎಂದು ತಮ್ಮ ಕಿತ್ತೋಗಿರುವ ಸರ್ಕಾರಕ್ಕೆ ತೇಪೆ ಹಾಕುವ ಕೆಲಸ ಮಾಡುತೀರಲ್ಲ ಸಿಎಂ ಸಿದ್ದರಾಮಯ್ಯನವರೇ, ಕಳೆದ ಆರು ತಿಂಗಳಿಂದ ವೃದ್ಧಾಪ್ಯ, ವಿಧವಾ, ವಿಕಲಚೇತನರ ಮಾಸಾಶನ ನೀಡಿಲ್ಲವೇಕೆ? ಎಂದು ಪ್ರಶ್ನಿಸಿದ್ದಾರೆ.

ಭ್ರಷ್ಟಾಚಾರ, ಕಮಿಷನ್, ಅವೈಜ್ಞಾನಿಕ ನೀತಿಗಳಿಂದ ರಾಜ್ಯದ ತೆರಿಗೆ ಹಣವನ್ನ ಲೂಟಿ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಸಾಮಾಜಿಕ ಭದ್ರತಾ ಪಿಂಚಣಿ ನೀಡಲೂ ಹಣವಿಲ್ಲದ ಶೋಚನೀಯ ಪರಿಸ್ಥಿತಿಯಲ್ಲಿದೆ ಎಂದು ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

Key words: R.Ashok -criticizes -government – miserable situation – no money -social security pension.