ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆರ್.ರಘು ಅಧಿಕಾರ ಸ್ವೀಕಾರ..

ಮೈಸೂರು,ನವೆಂಬರ್,26,2020(www.justkannada.in):  ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆರ್.ರಘು ಗುರುವಾರ ಅಧಿಕಾರ ಸ್ವೀಕರಿಸಿದರು.I didn't knew CM BSY will think so cheaply - KPCC President D.K. Shivakumar

ನಿಗಮದ ಪ್ರಧಾನ ವ್ಯವಸ್ಥಾಪಕ ನಾಗರಾಜ್ ಅವರು ಹೂಗುಚ್ಚ ನೀಡುವ ಮೂಲಕ ನೂತನ ಅಧ್ಯಕ್ಷರನ್ನು ಆತ್ಮೀಯವಾಗಿ ಸ್ವಾಗತಿಸಿದರು.  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು  ಮೊನ್ನೆಯಷ್ಟೇ ವಿವಿಧ ನಿಗಮ- ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದರು.

ಅಧಿಕಾರ ಸ್ವೀಕರಿಸಿ ಮಾತನಾಡಿದ ರಘು ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪರಿಕಲ್ಪನೆಯಲ್ಲಿ ದೇಶ ಮುನ್ನಡೆಯುತ್ತಿದ್ದರೆ, ರಾಜ್ಯದಲ್ಲಿ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರ ಮುಂದಾಳತ್ವದಲ್ಲಿ ಸಾಗುತ್ತಿದೆ. ಅವರ ಗುರಿ ಹಾಗೂ ಕಲ್ಪನೆಯೊಂದಿಗೆ ಹೆಜ್ಜೆ ಹಾಕಬೇಕಾದ ಹೊಣೆ ನಮ್ಮೆಲ್ಲರ ಮೇಲಿದೆ ಎಂದರು.

ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರ ಹೆಸರಿನಲ್ಲಿರುವ ಈ ಸಂಸ್ಥೆ ನಿಜವಾಗಿಯೂ ಹಿಂದುಳಿದ ವರ್ಗಗಳಿಗೆ ಹೊಸತೊಂದು ಆಶಾಭಾವನೆ ಸೃಷ್ಟಿಸುವ ನಿಟ್ಟಿನಲ್ಲಿ ನಾವುಗಳು ಕಾರ್ಯತತ್ಪರತೆಯನ್ನು ಮಾಡಬೇಕಿದೆ ಎಂದು ಹೇಳಿದರು.r-raghu-president-devaraja-aras-backward-classes-development-corporation

ಹಿಂದುಳಿದ ವರ್ಗಗಳ ಆಶಾಕಿರಣವಾಗಿದ್ದ ದೇವರಾಜ ಅರಸು ಅವರ ಬಗ್ಗೆ ತಳಸಮುದಾಯಗಳು ಅಪಾರವಾದ ನಂಬಿಕೆ ಇರಿಸಿದ್ದು, ಅದನ್ನು ನಾವು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಾಗಬೇಕಿದೆ ಎಂದು ತಿಳಿಸಿದರು.

Key words: R. Raghu -President -Devaraja aras-Backward Classes Development Corporation