ಬಿಡದಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಎದುರಿಸಿದ ರಚಿತಾ ರಾಮ್

ಬೆಂಗಳೂರು, ಆಗಸ್ಟ್ 25, 2021 (www.justkannada.in): ಬಿಡದಿ ಪೊಲೀಸ್​​ ಠಾಣೆಗೆ ರಚಿತಾ ರಾಮ್​ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ.

‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ಸಂಭವಿಸಿದ ಅವಘಡದಲ್ಲಿ ಫೈಟರ್​ ವಿವೇಕ್​ ಮೃತಪಟ್ಟಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್​ಪಿ ಮೋಹನ್ ಕುಮಾರ್ ರಚಿತಾ ಅವರನ್ನು 45 ನಿಮಿಷಗಳ ಕಾಲ ವಿಚಾರಣೆ ನಡೆಸಿದ್ದಾರೆ.

ಬಿಡದಿ ಪೊಲೀಸ್​​ ಠಾಣೆಗೆ ಹಾಜರಾದ ರಚಿತಾ ರಾಮ್ ಪೊಲೀಸರ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದರು.

ಇದು ಉದ್ದೇಶಪೂರ್ವಕವಾಗಿ ನಡೆದ ಘಟನೆ ಅಲ್ಲ. ಇಂತಹ ದುರಂತ ನಡೆದಿರುವುದಕ್ಕೆ ನನಗೂ ನೋವು ಇದೆ ಎಂದಿದ್ದಾರೆ ರಚಿತಾ.