Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Cinema ಭಟ್ಟರ ‘ಗರಡಿ’ಗೆ ಬಂದ ಡಿಂಪಲ್ ಕ್ವೀನ್ ರಚಿತಾ!

ಭಟ್ಟರ ‘ಗರಡಿ’ಗೆ ಬಂದ ಡಿಂಪಲ್ ಕ್ವೀನ್ ರಚಿತಾ!

ಬೆಂಗಳೂರು, 06 ಡಿಸೆಂಬರ್, 2021 (www.justkannada.in): ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ಚಿತ್ರದಲ್ಲಿ ಯಶಸ್ ಸೂರ್ಯ ನಾಯಕ ನಟನಾಗಿ ಆಯ್ಕೆಯಾಗಿದ್ದು, ಚಿತ್ರದಲ್ಲಿ ಸಚಿವ, ನಟ ಬಿ.ಸಿ. ಪಾಟೀಲ್ ಕೂಡಾ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರದ ನಿರ್ಮಾಪಕ ಮತ್ತು ಸಚಿವ, ಬಿ.ಸಿ.ಪಾಟೀಲ್ ಮತ್ತು ಚಿತ್ರತಂಡವನ್ನು ಭೇಟಿ ಮಾಡಿದ್ದ ರಚಿತಾ ಸಿನಿಮಾ ಕುರಿತು ಮಾತುಕತೆ ನಡೆಸಿದ್ದಾರೆ.

ಕಮರ್ಷಿಯಲ್ ಎಂಟರ್ ಟೈನರ್ ಆಗಿ ನಿರ್ಮಿಸಲಾಗುತ್ತಿರುವ ಗರಡಿ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.