ಆಗಸ್ಟ್ 10 ರಿಂದ 16 ರವರೆಗೆ ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ ಅದ್ಧೂರಿ ಆರಾಧನಾ ಮಹೋತ್ಸವ

ಬೆಂಗಳೂರು, ಜುಲೈ 24, 2022 (www.justkannada.in): ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವವನ್ನು ವೈಭವದಿಂದ ಆಚರಿಸಲು ಶ್ರೀ ಮಠ ತೀರ್ಮಾನಿಸಿದೆ.

ಕೊರೊನಾ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ಆರಾಧನಾ ಮಹೋತ್ಸವವನ್ನು ಅದ್ದೂರಿತನದಿಂದ ದೂರವಾಗಿತ್ತು.

ಇದೀಗ ಕೊರೊನಾ ಆತಂಕ ಕಡಿಮೆಯಾದ ಹಿನ್ನೆಲೆಯಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವವನ್ನು ವೈಭವದಿಂದ ಆಚರಿಸಲು ನಿರ್ಧರಿಸಲಾಗಿದೆ.

ಆಗಸ್ಟ್ 10 ರಿಂದ 16 ರವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ತನ್ನ ಎಂದಿನ ಗತ ವೈಭವ ಮಾದರಿಯಲ್ಲಿ ಅದ್ದೂರಿಯಾಗಿ ನಡೆಯಲಿದೆ.

ಭಕ್ತರಿಗಾಗಿ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿಗಳು ಸಹ ನಡೆಯುತ್ತಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ.