ಇಂದು ಸುಪ್ರೀಂ ಕೋರ್ಟ್’ನಲ್ಲಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು, ಜನವರಿ 08, 2021 (www.justkannada.in): ನಟಿ ರಾಗಿಣಿ ದ್ವಿವೇದಿಯ ಜಾಮೀನು ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್’ನಲ್ಲಿ ನಡೆಯಲಿದೆ.

ರಾಗಿಣಿ ದ್ವಿವೇದಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೆಲವು ದಿನಗಳ ಹಿಂದೆ ರಾಜ್ಯ ಹೈಕೋರ್ಟ್ ವಜಾ ಮಾಡಿತ್ತು. ಅದನ್ನು ಪ್ರಶ್ನಿಸಿ ರಾಗಿಣಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ರಾಗಿಣಿ ಸಲ್ಲಿಸಿರುವ ಜಾಮೀನು ಅರ್ಜಿಗೆ ಸಿಸಿಬಿ ಪರ ವಕೀಲರು ಈಗಾಗಲೇ ಆಕ್ಷೇಪಣೆ ಸಲ್ಲಿಸಿದ್ದಾರೆ.
ಎನ್‌ಡಿಪಿಎಸ್ ಮತ್ತು ಐಪಿಸಿ ಕಾಯ್ದೆಗಳ ಅಡಿ ರಾಗಿಣಿ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ರಾಗಿಣಿ ನವೆಂಬರ್ ಅಂತ್ಯದಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.