Friday, August 28, 2026

BDA Apartments

Home Front Page ನೈಋತ್ಯ ರೈಲ್ವೆ ಮೈಸೂರು ವಿಭಾಗದ ನೂತನ ರೈಲ್ವೆ ವ್ಯವಸ್ಥಾಪಕರಾಗಿ ರಾಹುಲ್ ಅಗರ್ವಾಲ್ ಅಧಿಕಾರ ಸ್ವೀಕಾರ…

ನೈಋತ್ಯ ರೈಲ್ವೆ ಮೈಸೂರು ವಿಭಾಗದ ನೂತನ ರೈಲ್ವೆ ವ್ಯವಸ್ಥಾಪಕರಾಗಿ ರಾಹುಲ್ ಅಗರ್ವಾಲ್ ಅಧಿಕಾರ ಸ್ವೀಕಾರ…

ಮೈಸೂರು,ಅಕ್ಟೋಬರ್,27,2020(www.justkannada.in): ನೈಋತ್ಯ ರೈಲ್ವೆ ಮೈಸೂರು ವಿಭಾಗಕ್ಕೆ  ನೂತನ ರೈಲ್ವೆ ವ್ಯವಸ್ಥಾಪಕರಾಗಿ ರಾಹುಲ್ ಅಗರ್ವಾಲ್ ಅವರನ್ನ ನೇಮಕ ಮಾಡಲಾಗಿದೆ.jk-logo-justkannada-logo

ನೈಋತ್ಯ ರೈಲ್ವೆ ಮೈಸೂರು ವಿಭಾಗದ ನೂತನ ರೈಲ್ವೆ ವ್ಯವಸ್ಥಾಪಕರಾಗಿ ರಾಹುಲ್ ಅಗರ್ವಾಲ್ ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ವ್ಯವಸ್ಥಾಪಕಿ ಅಪರ್ಣಗರ್ಗ್ ಅವರನ್ನ ಬೆಂಗಳೂರಿನ ಯಲಹಂಕ ರೈಲ್ವೆ ಗಾಲಿ ಕಾರ್ಖಾನೆಯಲ್ಲಿ ಪ್ರಧಾನ ಹಣಕಾಸು ಸಲಹೆಗಾರರಾಗಿ ನೇಮಕ ಮಾಡಲಾಗಿದೆ.

ನವದೆಹಲಿಯ ರೈಲ್ವೆ ಮಂಡಳಿಯಲ್ಲಿ ಸಂಚಾರ ಸಾರಿಗೆ (ಉಕ್ಕು) ಕಾರ್ಯನಿರ್ವಾಹಕ ನಿರ್ದೇಶಕರಾಗಿ ಹಾಗೂ ಮುಖ್ಯ ವಾಣಿಜ್ಯ ವ್ಯವಸ್ಥಾಪಕರಾಗಿ ರಾಹುಲ್ ಅಗರ್ವಾಲ್ ಕರ್ತವ್ಯ ನಿರ್ವಹಿಸುತ್ತಿದ್ದರು. ರಾಹುಲ್ ಅಗರ್ವಾಲ್ ತಮ್ಮ ಅತ್ಯುತ್ತಮ ಸೇವೆಗಾಗಿ 2013 ರಲ್ಲಿ ರೈಲ್ವೆ ಸಚಿವರ ಪ್ರಶಸ್ತಿಗೆ ಭಾಜನರಾಗಿದ್ದರು.

Key words:  Rahul Agarwal -takes over – new manager – South West Railway -Mysore Division