ಟೀಮ್ ಇಂಡಿಯಾದ ಹೆಡ್ ಕೋಚ್ ಹುದ್ದೆ ಕುರಿತು ರಾಹುಲ್ ದ್ರಾವಿಡ್ ಪ್ರತಿಕ್ರಿಯೆ…

ಬೆಂಗಳೂರು, ಜುಲೈ 31, 2021 (www.justkannada.in): ಟೀಮ್ ಇಂಡಿಯಾದ ಪ್ರಮುಖ ಕೋಚ್ ಆಗಿ ಆಯ್ಕೆಯಾಗುವುದರ ಕುರಿತು ರಾಹುಲ್ ದ್ರಾವಿಡ್ ಮನಬಿಚ್ಚಿ ಮಾತನಾಡಿದ್ದಾರೆ.

ಸದ್ಯಕ್ಕೆ ನಾನು ಮುಂದಿನ ದಿನಗಳ ಕುರಿತು ಯಾವುದೇ ರೀತಿಯ ಯೋಜನೆಗಳನ್ನು ಹಾಕಿಕೊಂಡಿಲ್ಲ. ಈಗ ನಾನಿರುವ ಸ್ಥಾನವನ್ನು ನಾನು ಬಹಳ ಇಷ್ಟಪಟ್ಟು ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಲಂಕಾ ವಿರುದ್ಧದ ಸರಣಿಯಲ್ಲಿ ಸೋಲು ಮತ್ತು ಗೆಲವು ಎರಡನ್ನೂ ಕಂಡಿರುವ ಕೋಚ್ ರಾಹುಲ್ ದ್ರಾವಿಡ್ ತಮ್ಮ ತಂಡದ ಆಟಗಾರರು ಮತ್ತು ತಮ್ಮ ಮುಂದಿನ ಯೋಜನೆಗಳ ಕುರಿತು ಈ ಕೆಳಕಂಡಂತೆ ಹಂಚಿಕೊಂಡಿದ್ದಾರೆ.

ಹೆಡ್ ಕೋಚ್ ಆಗುವ ಕುರಿತು ಯೋಚನೆಯನ್ನೇ ನಾನು ಮಾಡಿಲ್ಲ. ಸದ್ಯ ಯುವ ಪ್ರತಿಭೆಗಳಿಗೆ ತರಬೇತಿ ನೀಡಿ ಕ್ರಿಕೆಟ್ ಜಗತ್ತಿಗೆ ಉತ್ತಮ ಕ್ರಿಕೆಟಿಗರನ್ನು ನೀಡುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದೇನೆ. ತಮ್ಮ ಕೆಲಸದ ಬಗ್ಗೆ ಹೆಮ್ಮೆ ಇದೆ ಹೀಗಾಗಿ ಇದರಲ್ಲೇ ನನಗೆ ಹೆಚ್ಚಿನ ಸಂತೋಷ ಸಿಗುತ್ತದೆ ಎಂದಿದ್ದಾರೆ.