ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ ರಾಹುಲ್ ಗಾಂಧಿ: ಹಂಗಾಮಿ ಅಧ್ಯಕ್ಷರಾಗಿ ಇವರ ನೇಮಕ ಸಾಧ್ಯತೆ…

ನವದೆಹಲಿ,ಜು,3,2019(www.justkannada.in): ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ಘೋಷಣೆ ಮಾಡಿದ್ದು ಹಂಗಾಮಿ ಎಐಸಿಸಿ ಅಧ್ಯಕ್ಷರಾಗಿ ಮೋತಿಲಾಲ್ ಹೋರಾ ನೇಮಕವಾಗುವ ಸಾಧ್ಯತೆ ಇದೆ.

ಲೋಕಸಭಾ ಚುನಾವಣೆ ಬಳಿಕ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ರಾಹುಲ್ ಗಾಂಧಿ  ನಿರ್ಧಾರ ಮಾಡಿದ್ದರು. ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಬಗ್ಗೆ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಹುಲ್ ಗಾಂಧಿ, ನಾನು ಕಾಂಗ್ರೆಸ್‌ ಅಧ್ಯಕ್ಷನಲ್ಲ. ನಾನು ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಈಗ ಉತ್ತರಾಧಿಕಾರಿ ನೇಮಕ ಮಾಡುವ ಜವಾಬ್ದಾರಿ ನಾಯಕರ ಮೇಲಿದೆ. ಪಕ್ಷದ ಕಾರ್ಯಕಾರಿ ಸಮಿತಿ ಕೂಡಲೇ ಸಭೆ ಸೇರಿ ಹೊಸ ಅಧ್ಯಕ್ಷನ ಆಯ್ಕೆ ಮಾಡಿ. ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಕೂಡಲೇ ಸಭೆ ಸೇರಿ ಕಾಂಗ್ರೆಸ್‌ಗೆ ನೂತನ ಅಧ್ಯಕ್ಷರ ಮಾಡಬೇಕು. ಅತಿ ಶೀಘ್ರದಲ್ಲೇ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂಬ ಭರವಸೆ ನನಗಿದೆ ಎಂದು ತಿಳಿಸಿದರು

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಅತ್ಯಂತ ಹೀನಾಯವಾಗಿ ಪರಾಭವಗೊಂಡ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಹುಲ್‌ ಗಾಂಧಿ ರಾಜೀನಾಮೆ ನೀಡಿದ್ದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಕೇವಲ 52 ಸ್ಥಾನ ಪಡೆದುಕೊಂಡಿತ್ತು. ಲೋಕಸಭಾ ಚುನಾವಣೆ ಫಲಿತಾಂಶ ನಂತರ ರಾಹುಲ್‌ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರ ಕೈಗೊಂಡಿದ್ದರು. ಆದರೆ ರಾಹುಲ್‌ ಪಕ್ಷವನ್ನು ಮುನ್ನಡೆಸಬೇಕು ಎಂದು ಎಲ್ಲ ಕಾಂಗ್ರೆಸ್‌ ನಾಯಕರು ಒತ್ತಡ ಹೇರಿದರು. ಆದರೆ ರಾಹುಲ್‌ ಗಾಂಧಿ ಇದಕ್ಕೆ ಸೊಪ್ಪು ಹಾಕಲಿಲ್ಲ. ಈಗ ಕಾಂಗ್ರೆಸ್‌ ಪಕ್ಷ ಹೊಸ ಅಧ್ಯಕ್ಷನ ಹುಡುಗಾಟ ನಡೆಸಬೇಕಾಗಿದೆ.

key words: Rahul Gandhi -announces -resignation –AICC-president