ಚುನಾವಣಾ ಅಕ್ರಮ, ರಾಹುಲ್ ಗಾಂಧಿ ಪ್ರತಿಭಟನೆಗೆ ಸಿ.ಟಿ ರವಿ ತಿರುಗೇಟು

ಬೆಂಗಳೂರು,ಆಗಸ್ಟ್,2,2025 (www.justkannada.in): ಲೋಕಸಭೆ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಭಟನೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ತಿರುಗೇಟು  ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಿ.ಟಿ ರವಿ, ಮತದಾರ ಪಟ್ಟಿ ಪರಿಷ್ಕರಣೆಗೆ ಅಧಿಕಾರಿಗಳನ್ನ ಬಳಸಿಕೊಳ್ಳುತ್ತಾರೆ. 2014ಕ್ಕೂ ಮೊದಲು ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. 2013 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು 2024ರ ಎಂಪಿ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಹಾಗಾದರೇ ಅಧಿಕಾರರ ದುರ್ಬಳಕೆ ಮಾಡಿಕೊಂಡವರು ಯಾರು ಎಂದು ಪ್ರಶ್ನಿಸಿದರು.

ಅಲ್ಲದೆ ನೀವೇ ಚುನಾವಣಾ ಅಕ್ರಮವೆಸಗಿರಬಹುದೇನೋ ಎಂಬ ಅನುಮಾನ ಮೂಡಿದೆ ಎಂದು  ಸಿಟಿ ರವಿ ಟಾಂಗ್ ಕೊಟ್ಟಿದ್ದಾರೆ.

Key words: Election, Rahul Gandhi, protests, CT Ravi