ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವದಿಂದ ಅನರ್ಹ: ಬಿಜೆಪಿಗೆ ತಿರುಗುಬಾಣವಾಗುತ್ತದೆ -ಎಂ.ಬಿ ಪಾಟೀಲ್ ಕಿಡಿ.

ವಿಜಯಪುರ,ಮಾರ್ಚ್,24,2023(www.justkannada.in): ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪದ ಮೇಲೆ ಜೈಲುಶಿಕ್ಷೆಗೆ ಗುರಿಯಾದ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವದಿಂದ ಅರ್ಹಗೊಂಡಿರುವುದನ್ನ ಮಾಜಿ ಸಚಿವ ಎಂ.ಬಿ ಪಾಟೀಲ್ ಖಂಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಎಂ.ಬಿ ಪಾಟೀಲ್, ರಾಹುಲ್ ಗಾಂಧಿ  ಅವರ ಜನಪ್ರಿಯತೆ ಸಹಿಸಿಕೊಳ್ಳಲು ಬಿಜೆಪಿಗೆ ಆಗುತ್ತಿಲ್ಲ. ಭಾರತ್ ಜೋಡೋ ಯಾತ್ರೆ ಬಳಿಕ ರಾಹುಲ್ ಗಾಂಧಿಗೆ ಜನಪ್ರಿಯತೆ ಹೆಚ್ಚಾಯಿತು. ಹೀಗಾಗಿ ಬಿಜೆಪಿಗೆ ಸಹಿಸಲು ಆಗುತ್ತಿಲ್ಲ.  ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವದಿಂದ ಅನರ್ಹತೆ ಬಿಜೆಪಿಗೆ ತಿರುಗುಬಾಣವಾಗುತ್ತದೆ ಎಂದು ಕಿಡಿಕಾರಿದರು.

Key words: Rahul Gandhi-disqualified – Lok Sabha-membership- MB Patil-outrage