Sunday, August 23, 2026

BDA Apartments

Home Front Page ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಮುಂದೆ ರಾಹುಲ್ ಗಾಂಧಿ ಯಾವ ಲೆಕ್ಕ- ಮಾಜಿ ಸಿಎಂ...

ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಮುಂದೆ ರಾಹುಲ್ ಗಾಂಧಿ ಯಾವ ಲೆಕ್ಕ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ..

ಬಾಗಲಕೋಟೆ,ಮಾರ್ಚ್,15,2023(www.justkannada.in):  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಕುರಿತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಲೇವಡಿ ಮಾಡಿದ್ದಾರೆ.

ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಬಿಎಸ್ ಯಡಿಯೂರಪ್ಪ, ರಾಹುಲ್ ಗಾಂಧಿ ಹೆಚ್ಚು ಹೆಚ್ಚು ಪ್ರಚಾರ ಮಾಡಿದ್ದಷ್ಟು ನಾವು ಹೆಚ್ಚು ಹೆಚ್ಚು ಸ್ಥಾನಗಳನ್ನ ಗೆಲ್ಲುತ್ತೇವೆ.  ನಾವು ಹೆಚ್ಚು ಸ್ಥಾನಗಳನ್ನ ಗೆಲ್ಲುವುದಕ್ಕೆ ಅನುಕೂಲ ಆಗುತ್ತೆದೆ.  ನಮ್ಮ ನಾಯಕರಿಗೂ ರಾಹುಲ್ ಗಾಂಧಿಗೂ ಎಲ್ಲಿಂದ ಎಲ್ಲಿ ಸಂಬಂಧ. ಮೋದಿ, ಅಮಿತ್ ಶಾ ಮುಂದೆ ರಾಹುಲ್ ಯಾವ ಲೆಕ್ಕ.  ರಾಹುಲ್ ಗಾಂಧಿ ಪ್ರಚಾರದಿಂದ ಯಾವುದೇ ಪರಿಣಾಮ ಬೀರಲ್ಲ ಎಂದರು.

ಕಾಂಗ್ರೆಸ್ ಸರ್ಕಾರವಿದ್ದಾಗ ತುರ್ತು ಪರಿಸ್ಥಿತಿ ಜಾರಿಗೆ ತಂದರು. ಅಟಲ್ ಬಿಹಾರಿ ವಾಜಿಪೇಯಿ ಸೇರಿ ಅನೇಕರನ್ನ ಆಗ ಬಂಧಿಸಿದ್ದರು. ಇವತ್ತು ಅದೇ ಕಾಂಗ್ರೆಸ್ ನವರು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತಾರೆ.  ಮೋದಿ ಅಮಿತ್ ಶಾರನ್ನ ಎದುರಿಸುವಂತಹ ನಾಯಕರು ಯಾರು ಇಲ್ಲ. ಕಾಂಗ್ರೆಸ್ ನಲ್ಲಿ ಯಾರು ಇಲ್ಲ ಅನ್ನೋದು ಸಾಮಾನ್ಯ ಜನರ ಭಾವನೆ. ಹೀಗಾಗಿ ರಾಜ್ಯದಲ್ಲಿ 140ಕ್ಕೂ ಹೆಚ್ಚು ಸೀಟ್ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಬಿಎಸ್ ವೈ ತಿಳಿಸಿದರು.

ಸಚಿವ ಸೋಮಣ್ಣ ಅಸಮಾಧಾನ ವಿಚಾರ ಕುರಿತು ಮಾತನಾಡಿದ ಬಿಎಸ್ ಯಡಿಯೂರಪ್ಪ, ಯಾವುದೇ ಕಾರಣಕ್ಕೂ  ಸಚಿವ ಸೋಮಣ್ಣ ಪಕ್ಷ ಬಿಡುವುದಿಲ್ಲ.  ಸಚಿವಸೋಮಣ್ಣ  ಆ ಭಾಗದಲ್ಲಿ ಒಳ್ಳೆ ಕೆಲಸ ಮಾಡಿದ್ದಾರೆ. ಅವರ ಬಗ್ಗೆ ಗೌರವವಿದೆ. ಹೀಗಾಗಿ ಸೋಮಣ್ಣ ನಮ್ಮ ಜೊತೆ ಇರ್ತಾರೆ. ಸೋಮಣ್ಣ ಸಹಕಾರದಿಂದಲೇ ನಾವು ಅಧಿಕಾರಕ್ಕೆ ಬಂದಿದ್ದು ಎಂದರು.

Key words: Rahul Gandhi- in front of-PM- Modi – Amit Shah- Former CM- BS Yeddyurappa..