ಯಾತ್ರೆ ಮೂಲಕ ರಾಹುಲ್ ಗಾಂಧಿ ರಾಜ್ಯ ಕಾಂಗ್ರೆಸ್ ಗೆ ಹೊಸ ಶಕ್ತಿ ತುಂಬಿದ್ದಾರೆ –ಡಿ.ಕೆ ಶಿವಕುಮಾರ್.

ಬೆಂಗಳೂರು,ಅಕ್ಟೋಬರ್,25,2022(www.justkannada.in):  ಭಾರತ ಜೋಡೋ ಯಾತ್ರೆ ಮೂಲಕ ರಾಹುಲ್ ಗಾಂಧಿ ಅವರು ರಾಜ್ಯ ಕಾಂಗ್ರೆಸ್ ಗೆ ಹೊಸ ಶಕ್ತಿ ತುಂಬಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್, ಭಾರತ್ ಜೋಡೋ ಯಾತ್ರೆಯ ಪರಿಣಾಮದ ಮಾಹಿತಿ ಸಂಗ್ರಹಕ್ಕೆ ಧೃವ ನಾರಾಯಣ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.  ಯಾತ್ರೆಯ ಪರಿಣಾಮದ ಬಗ್ಗೆ ಪಕ್ಷದ ಮುಖಂಡರ ಜೊತೆ ಚರ್ಚೆ ಮಾಡಲಾಗುತ್ತದೆ.  ಯಾತ್ರೆಯಲ್ಲಿ ವ್ಯಕ್ತವಾದ ಅಭಿಪ್ರಾಯ ಪ್ರಣಾಳಿಕೆಯಲ್ಲಿ ಸೇರಿಸುತ್ತೇವೆ.  ಚುನಾವಣೆ ಪ್ರನಾಳಿಕೆಯಲ್ಲಿ ಜನರ ಅಭಿಪ್ರಾಯ ಸೇರಿಸುತ್ತೇವೆ ಎಂದರು.

ಮೇಕೆದಾಟು ಪಾದಯಾತ್ರೆಗೆ ಪ್ಲಾನ್ ಕೊಟ್ಟಿದ್ದ ರಾಹುಲ್ ಗಾಂಧಿ.  ಫ್ರೀಡಂ ಮಾರ್ಚ್ ಕೂಡ ಕಾಂಗ್ರೆಸ್  ಪಕ್ಷದ  ಮೈಲುಗಲ್ಲಾಯಿತು.  ಸರ್ಕಾರದ 40 ಪರ್ಸೆಂಟ್ ಕಮಿಷನ್ ವಿಚಾರ ಹಳ್ಳಿ ಹಳ್ಳಿಗೆ ತಲುಪಿದೆ. ಭಾರತ್ ಜೋಡೋ ಯಾತ್ರೆ ಮಾಡಿ ರಾಹುಲ್ ಗಾಂಧಿ ಶಕ್ತಿ ನೀಡಿದ್ದಾರೆ ಎಂದರು.

Key words: Rahul Gandhi – new strength – state Congress -DK Shivakumar.