ರಾಹುಲ್ ಗಾಂಧಿ ಒಬ್ಬ ಪಾಕ್ ಏಜೆಂಟ್ – ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ…

ವಿಜಯಪುರ,ಡಿ,17,2019(www.justkannada.in):  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜನರ ದಾರಿ ತಪ್ಪಿಸುತ್ತಿರುವವರು ಪಾಕ್ ಏಜೇಂಟ್ . ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒಬ್ಬ ಪಾಕ್ ಏಜೇಂಟ್ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

ವಿಜಯಪುರದಲ್ಲಿ ಇಂದು ಮಾತನಾಡಿ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಾಷ್ಟ್ರೀಯ ಪೌರತ್ವ ಕಾಯ್ದೆ ವಿಚಾರದಲ್ಲಿ ಜನರ ದಾರಿ ತಪ್ಪಿಸುತ್ತಿರುವ ಕೆಲಸವನ್ನು ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೂಲ ಪಾಕಿಸ್ತಾನವಾಗಿದ್ದು, ಅವರು ಪಾಕ್ ಏಜೆಂಟ್‍ರಾಗಿದ್ದಾರೆ ಕಾಂಗ್ರೆಸ್ ಪಕ್ಷ ಹಾಗೂ ಕೆಲ ಜಾತ್ಯಾತೀತ ಎನ್ನುವ ಕೋಮುವಾದಿ ಪಕ್ಷಗಳು ಒಂದು ಕೋಮಿನ ಜನರನ್ನು ಒಕ್ಕಲೆಬ್ಬಿಸುತ್ತಿದ್ದಾರೆ. ಡಿಸೆಂಬರ್ 21ರಂದು ವಿಜಯಪುರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರ ಬೃಹತ್ ರ್ಯಾಲಿ ನಡೆಸುತ್ತೇವೆ ಎಂದರು.

ಸಚಿವ ಸ್ಥಾನಕ್ಕೆ ಅಭಿಮಾನಿಗಳಿಂದ ಒತ್ತಡ ಕುರಿತು ಪ್ರತಿಕ್ರಿಯಿಸಿದ ಬಸನಗೌಡ ಪಾಟೀಲ್ ಯತ್ನಾಳ್, ನಾನು ಹಿಂದೆ ಕುಂತು ಆಟ ಆಡುವ ರಾಜಕಾರಣಿ ಅಲ್ಲ. ಅಭಿಮಾನಿಗಳನ್ನು ಮುಂದೆ ಬಿಟ್ಟು ಸಚಿವ ಸ್ಥಾನಕ್ಕಾಗಿ ಒತ್ತಡ ಹಾಕುವುದಿಲ್ಲ. ಸಚಿವ ಸ್ಥಾನ ನೀಡುವುದು ಸಿಎಂ ಮತ್ತು ಹೈಕಮಾಂಡ್‍ಗೆ ಬಿಟ್ಟಿದ್ದು. ವಾಜಪೇಯಿ ಸರ್ಕಾರದಲ್ಲಿ ನನ್ನನ್ನು ಕರೆದು ಕೇಂದ್ರಮಂತ್ರಿ ಮಾಡಿದ್ದರು. ನನಗೆ ಪಕ್ಷ ಹಾಗೂ ಸರ್ಕಾರ ಮುಖ್ಯ. ನಾವು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದರೆ ಸರ್ಕಾರಕ್ಕೆ ಅಸ್ಥಿರತೆ ಕಾಡುತ್ತೆ. ಸರ್ಕಾರದ ಹಿತದೃಷ್ಟಿಯಿಂದ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲ್ಲ. ನಾನು ಸಮರ್ಥವಾಗಿ ಶಾಸಕ ಸ್ಥಾನ ನಿಭಾಯಿಸುತ್ತಿದ್ದೇನೆ ಎಂದರು.

Key words: Rahul Gandhi – Pakistani agent-BJP MLA -Basanagowda Patil Yatnal -vijaypur