ರಾಹುಲ್ ಗಾಂಧಿಗೆ ದೇಶದ ಅಭಿವೃದ್ದಿ ಬಗ್ಗೆ ಅರಿವಿಲ್ಲ- ಪ್ರಧಾನಿ ಮೋದಿ ಟೀಕೆ

ಕೊಚ್ಚಿ,ಮಾರ್ಚ್,11,2026 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ‘ದೇಶದಲ್ಲಿ ಆಗುತ್ತಿರುವ  ಅಭಿವೃದ್ಧಿಗಳ ಬಗ್ಗೆ ಅರಿವಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.

ಇಂದು  ಕೇರಳದ ಕೊಚ್ಚಿಯಲ್ಲಿ ನಡೆದ ಎನ್‌ಡಿಎ ಸಮಾವೇಶಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ರಾಹುಲ್ ಗಾಂಧಿಗೆ ದೇಶದಲ್ಲಿನ ಅಭಿವೃದ್ಧಿಯ ಬಗ್ಗೆ ಅರಿವಿಲ್ಲ. ಡ್ರೋನ್ ವಲಯದಲ್ಲಿ ದೇಶದ ಯುವಜನರು ಉತ್ತಮ ಕೆಲಸ ಮಾಡುತ್ತಿದ್ದಾರೆ. ‘ಕೇರಳವನ್ನು ಕೃತಕ ಬುದ್ಧಿಮತ್ತೆ (ಎಐ) ಹಾಗೂ ಭವಿಷ್ಯದ ತಂತ್ರಜ್ಞಾನದ ಕೇಂದ್ರವನ್ನಾಗಿ ಮಾರ್ಪಾಡಿಸಲು ಬಿಜೆಪಿ ಕಾರ್ಯ ಮಗ್ನವಾಗಿದೆ ಎಂದರು.

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುತ್ತಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಸಿಲುಕಿರುವ ಭಾರತೀಯರಿಗೆ ಎಲ್ಲ ಸಹಾಯವನ್ನು ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಕೊಲ್ಲಿ ರಾಷ್ಟ್ರಗಳು ಭಾರತೀಯರ ಬಗ್ಗೆ ಅತೀವ ಕಾಳಜಿ ವಹಿಸುತ್ತಿವೆ. ಅದಕ್ಕಾಗಿ ನಾವು ಕೃತಜ್ಞರಾಗಿದ್ದೇವೆ ಎಂದು ಪ್ರಧಾನಿ ಮೋದಿ ತಿಳಿಸಿದರು.

Key words: Rahul Gandhi,  country, development, PM Modi