ವಯನಾಡು ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ, ಅಂಗೀಕಾರ

ನವದೆಹಲಿ,ಜೂನ್,24,2024 (www.justkannada.in): ವಯನಾಡು  ಲೋಕಸಭಾ ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದು, ರಾಜೀನಾಮೆ ಅಂಗೀಕಾರವಾಗಿದೆ.

ವಯನಾಡ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯನ್ನು ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅಂಗೀಕರಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ರಾಯ್ ಬರೇಲಿ, ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿ ರಾಯ್ ಬರೇಲಿ  ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ವಯನಾಡು ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದರು. 18 ನೇ ಲೋಕಸಭೆಯ ಮೊದಲ ಅಧಿವೇಶನವು ಹೊಸ ಸಂಸತ್ ಕಟ್ಟಡದಲ್ಲಿ ಇಂದು ಪ್ರಾರಂಭವಾಗಿದೆ.

Key words: Rahul Gandhi- resignation –Wayanad Constituency