Monday, September 14, 2026

BDA Apartments

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ BDA JK_A...
Home Front Page ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ

ಬೆಂಗಳೂರು,ಜೂನ್,9,2026 (www.justkannada.in): ನಿನ್ನೆ ಹೃದಯಾಘಾತದಿಂದ ನಿಧನರಾದ ಮಾಜಿ ಸಿಎಂ ಡಿ.ದೇವರಾಜ ಅರಸು ಮೊಮ್ಮಗ, ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಅವರಿಗೆ ಹಲವು ರಾಜಕೀಯ ಗಣ್ಯರು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಇಂದು ಸೂರಜ್ ಹೆಗ್ಡೆ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.

ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಸೂರಜ್ ಹೆಗ್ಡೆ ಅವರ ಪಾರ್ಥೀವ ಶರೀರ ಇಡಲಾಗಿದೆ. ಇಂದು ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ ಅವರು ಸೂರಜ್ ಹೆಗ್ಡೆ ಅವರಿಗೆ ಅಂತಿಮ ನಮನ ಸಲ್ಲಿಸಿ  ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ suraj hegde

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಸಿ ವೇಣಗೋಪಾಲ್ ಸಹ ಅಂತಿಮ ದರ್ಶನ ಪಡೆದರು.  ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್,  ಡಿಸಿಎಂ ಪರಮೇಶ್ವರ್   ಸಾಥ್ ನೀಡಿದರು.justkannada jk02_new jk02 new

Key words: Rahul Gandhi, Congress leader, Suraj Hegde