ಮಾರ್ಚ್ 31 ರಂದು ರಾಜ್ಯಕ್ಕೆ ರಾಹುಲ್ ಗಾಂಧಿ ಭೇಟಿ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಹಿತಿ.

ಬೆಂಗಳೂರು,ಮಾರ್ಚ್,29,2022(www.justkannada.in):  ‘ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನ ಹಿನ್ನೆಲೆ ರಾಹುಲ್ ಗಾಂಧಿ ಅವರು ಮಾರ್ಚ್ 31ರಂದು  ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ  ಡಿ. ಕೆ ಶಿವಕುಮಾರ್ ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನದ ಮೂಲಕ ಹೊಸ ದಾಖಲೆಯನ್ನು ಬರೆದಿದೆ.  ಈ ಅಭಿಯಾನದ ಪ್ರಯುಕ್ತ ಮಾರ್ಚ್ 31ರಂದು ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಕರ್ನಾಟಕದ ಜನರು ಕಾಂಗ್ರೆಸ್ ಪಕ್ಷದ ಮೇಲಿರಿಸಿರುವ ಪ್ರೀತಿ-ವಿಶ್ವಾಸವು ಮಾತಿಗೆ ನಿಲುಕದ್ದು ಹಾಗೂ ಈ ಸದಸ್ಯತ್ವ ಅಭಿಯಾನವು ಅದನ್ನು ತೋರಿಸಿಕೊಟ್ಟಿದೆ. ಜನರ ಹಿತಾಸಕ್ತಿಯನ್ನು ಕಾಪಾಡುವುದೊಂದೇ ಪಕ್ಷದ ಉದ್ದೇಶ ಎಂದರು.

ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಬಂದು ನಂತರ ಅಲ್ಲಿಂಧ ತುಮಕೂರಿಗೆ ತೆರಳಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮದಿನದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು.

Key words: Rahul Gandhi- visits -state -March 31-DK Shivakumar