ನವದೆಹಲಿ, ನವೆಂಬರ್,5,2025 (www.justkannada.in): ಇತ್ತೀಚೆಗೆ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ವೇಳೆ ಮತಗಳ್ಳತನವಾಗಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೀಗ ಹರಿಯಾಣ ವಿಧಾನಸಭೆ ಚುನಾವಣೆಯಲ್ಲೂ ಮತಗಳ್ಳತನ ನಡೆದಿದೆ ಎಂದು ಹೊಸಬಾಂಬ್ ಸಿಡಿಸಿದ್ದಾರೆ.
ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ರಾಹುಲ್ ಗಾಂಧಿ, ಹರಿಯಾಣ ವಿಧಾನಸಭಾ ಚುನಾವಣೆಯಲ್ಲೂ 25 ಲಕ್ಷ ಮತಗಳ್ಳತನ ನಡೆದಿದೆ. ಚುನಾವಣೆ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಪರ ವರದಿ ಬಂದಿತ್ತು. ಆದರೆ ಫಲಿತಾಂಶ ಬಳಿಕ ಬಿಜೆಪಿ ಅಭ್ಯರ್ಥಿಗಳು ಗೆದ್ದದ್ದರು. ನಾನು ಹೇಳುತ್ತಿರುವುದು 100% ಸತ್ಯ ಎಂದರು.
ಈ ಹಿಂದೆ ಬೆಂಗಳೂರಿನ ಮಹದೇವಪುರ ಲೋಕಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ. ಅಲ್ಲದೆ ಆಳಂದ ಕ್ಷೇತ್ರದಲ್ಲೂ ಕೂಡ ಮತಗಳ್ಳತನ ಆಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.
Key words: Rahul Gandhi, alleges, votes rigged , Haryana , elections







