Friday, September 18, 2026

BDA Apartments

ಬೆಂಗಳೂರಿನಲ್ಲಿ ಮಳೆ ಅವಾಂತರ: GBA ಅಧಿಕಾರಿಗಳಿಗೆ ಖಡಕ್ ಸೂಚನೆಗಳನ್ನ ಕೊಟ್ಟ ಸಿ...
Home Front Page ಬೆಂಗಳೂರಿನಲ್ಲಿ ಮಳೆ ಅವಾಂತರ: GBA ಅಧಿಕಾರಿಗಳಿಗೆ ಖಡಕ್ ಸೂಚನೆಗಳನ್ನ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಮಳೆ ಅವಾಂತರ: GBA ಅಧಿಕಾರಿಗಳಿಗೆ ಖಡಕ್ ಸೂಚನೆಗಳನ್ನ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,30,2026 (www.justkannada.in):  ನಿನ್ನೆ ಬೆಂಗಳೂರಿನಲ್ಲಿ ಧಾರಕಾರ ಮಳೆ ಬಿರುಗಾಳಿಯಿಂದಾಗಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ ಮೃತಪಟ್ಟರೆ ಹಲವೆಡೆ ಮರಗಳು ಧರೆಗುರುಳಿ ಅವಾಂತರ ಸೃಷ್ಠಿಸಿದೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳಿಗೆ ಕೆಲವೊಂದು ಖಡಕ್ ಸೂಚನೆಗಳನ್ನ ನೀಡಿದ್ದಾರೆ.

ನಗರದ ಮ್ಯಾನ್ ಹೋಲ್ ಗಳು ಬ್ಲಾಕ್ ಆಗಿದ್ದರೇ ಸರಿಪಡಿಸಿ. ಬೀಳುವ ಹಂತದಲ್ಲಿರುವ ಮರದ ಕೊಂಬಗಳನ್ನ ಕತ್ತರಿಸಿ. ನಗರದಲ್ಲಿ ಈಗ ಬಿದ್ದಿರುವ ಮರದ ಕೊಂಬೆಗಳನ್ನ ತೆರವು ಮಾಡಿ.  ಸಂಚಾರಕ್ಕೆ ಅನುವು ಮಾಡಿಕೊಡಿ ಎಂದು ಸೂಚಿಸಿದ್ದಾರೆ.

ಹಾಗೆಯೇ ಅಂಡರ್ ಪಾಸ್ ಗಳಲ್ಲಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳಿ ನಗರದ ಪ್ರಮುಖ ರಸ್ತೆಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಿ. ಬೌರಿಂಗ್ ಆಸ್ಪತ್ರೆಯ ರೀತಿ ದುರ್ಘಟನೆ ನಡೆಯದಂತೆ ಕ್ರಮ ವಹಿಸಿ  ಎಂದು ಜಿಬಿಎ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

Key words: Rain, Bengaluru, CM Siddaramaiah,  instructions, GBA officials