ಹಾಸನದಲ್ಲಿ ಮುಂದುವರೆದ ವರುಣನ ಆರ್ಭಟ: ಸಕಲೇಶಪುರ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ.

ಹಾಸನ,ಆಗಸ್ಟ್,12,2022(www.justkannada.in):  ರಾಜ್ಯದಲ್ಲಿ ಆಬ್ಬರಿಸಿದ್ಧ ಮಳೆರಾಯ ಕೊಂಚ ಮಟ್ಟಿಗೆ ಬಿಡುವು ನೀಡಿದ್ದಾನೆ. ಈ ಮಧ್ಯೆ ಕೆಲವು ಕಡೆಗಳಲ್ಲಿ ಮಳೆಯಾಗುತ್ತಿದ್ದು, ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ.

ಮಳೆ ಹಿನ್ನೆಲೆ ಸಕಲೇಶಪುರ ತಾಲೂಕಿನಲ್ಲಿ ಇಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.  ಹಾಸನ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಸಕಲೇಶಪುರ ತಾಲೂಕಿನಲ್ಲಿ ಇಂದೂ ಸಹ ಮಳೆಯ ಆರ್ಭಟ ಮುಂದುವರೆದಿದ್ದು, ಮಕ್ಕಳ ಸುರಕ್ಷತೆ ಹಿತದೃಷ್ಟಿಯಿಂದ ಇಂದು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಪಶ್ಚಿಮಘಟ್ಟಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಕಾವೇರಿ, ಕೃಷ್ಣಾ, ಭೀಮಾ ನದಿಗಳು ಸೇರಿದಂತೆ ಎಲ್ಲಾ ನದಿಗಳು ತುಂಬಿ ಹರಿಯುತ್ತಿವೆ. ಇನ್ನು ರಾಯಚೂರು, ವಿಜಯಪುರ, ಯಾದಗಿರಿ, ಕಲಬುರಗಿ, ಬೆಳಗಾವಿಯಲ್ಲಿ ಮಳೆ ಇಳಿಕೆಯಾಗಿದೆ.

Key words: rain-continued –Hassan-Holiday -announcement – Sakleshpur- taluk