ರಾಜ್ಯದಲ್ಲಿ ಮಳೆಹಾನಿ: 124 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ ಸರ್ಕಾರ.

ಬೆಂಗಳೂರು,ಅಕ್ಟೋಬರ್,14,2022(www.justkannada.in):  ರಾಜ್ಯದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು ಈ ನಡುವೆ  13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಹಾನಿ ಹಿನ್ನೆಲೆ ಮೂಲಭೂತ ಸೌಕರ್ಯ ಹಾನಿ ಪರಿಹಾರಕ್ಕೆ ರಾಜ್ಯ ಸರ್ಕಾರ 124 ರೂ. ಕೋಟಿ ಅನುದಾನ ಬಿಡುಗಡೆ ಮಾಡಿದೆ.

ನೆರೆಹಾನಿ, ಪರಿಹಾರ ಕುರಿತಂತೆ ನಿನ್ನೆ  ಸಿಎಂ ಬಸವರಾಜ ಬೊಮ್ಮಾಯಿ ಅವರು 13 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿ ಸಮರ್ಪಕ ಪರಿಹಾರ ಕಾರ್ಯ ಕೈಗೊಳ್ಳುವಂತೆ ಸೂಚನೆ ನೀಡಿದ್ಧರು.

ಇಂದು 124 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ.  ಕಂದಾಯ ಇಲಾಖೆ ಮೂಲಕ ಡಿಸಿಗಳ, ಪಿಡಿ ಖಾತೆಗೆ ಅನುದಾನ ಬಿಡುಗಡೆ ಮಾಡಿದೆ. ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಮಳೆ ಸುರಿಯುತ್ತಿದೆ. ಹಲವು ಜಿಲ್ಲೆಗಳಲ್ಲಿ ನೆರೆ, ಪ್ರವಾಹ ಕೂಡ ಉಂಟಾಗಿದ್ದು, ಅನೇಕ ಪ್ರಮಾಣದಲ್ಲಿ ಹಾನಿಯಾಗಿದೆ. ಅನೇಕ ಜನರು ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಹಾಗಾಗಿ ಮೂಲಭೂತ ಸೌಕರ್ಯ ಹಾನಿ ಪರಿಹಾರಕ್ಕೆಂದು ರಾಜ್ಯ ಸರ್ಕಾರ 124 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

Key words: Rain -damage – state- 124 crores- grant -released – government.