Monday, September 14, 2026

BDA Apartments

ಎಡೆಬಿಡದೆ ಸುರಿಯುತ್ತಿರುವ ಮಳೆ: ಮೈಸೂರು ಜಿಲ್ಲೆಯ ಎರಡು ತಾಲ್ಲೂಕುಗಳ ಶಾಲಾ-ಕ...
Home Front Page ಎಡೆಬಿಡದೆ ಸುರಿಯುತ್ತಿರುವ ಮಳೆ: ಮೈಸೂರು ಜಿಲ್ಲೆಯ ಎರಡು ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ….

ಎಡೆಬಿಡದೆ ಸುರಿಯುತ್ತಿರುವ ಮಳೆ: ಮೈಸೂರು ಜಿಲ್ಲೆಯ ಎರಡು ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ….

ಮೈಸೂರು,ಆ,7,2019(www.justkannada.in):  ಎಡೆಬಿಡದೆ ಮಳೆಯ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲ್ಲೂಕು ಹಾಗೂ ಪಿರಿಯಾಪಟ್ಟಣ ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಕಳೆದ ಎರಡು ದಿನಗಳ ಹಿಂದಿನಿಂದ ಎಚ್.ಡಿ ಕೋಟೆ ತಾಲೂಕಿನಾದ್ಯಂತ  ‌ ಧಾರಾಕಾರ ಮಳೆ ಸುರಿಯುತ್ತಿದ್ದು ಈ ಹಿನ್ನೆಲೆ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಎಚ್.ಡಿ ಕೋಟೆ ತಹಶೀಲ್ದಾರ್ ಆರ್.ಮಂಜುನಾಥ್ ರಜೆ  ಘೋಷಣೆ ಮಾಡಿದ್ದಾರೆ.

ಇನ್ನು ಇದೇ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲೂ ನಿರಂತರ ಮಳೆಯಾಗುತ್ತಿದ್ದು ಮಳೆ ಹೆಚ್ಚಾದ ಹಿನ್ನೆಲೆ, ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ತಹಶಿಲ್ದಾರ್  ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಮಳೆರಾಯ ಬಿಟ್ಟು ಬಿಡದೇ ಸುರಿಯುತಿದ್ದು ಈ ನಡುವೆ ಉತ್ತರ ಕರ್ನಾಟಕದಲ್ಲಿ ಕೃಷ್ಣಾನದಿ ಪಾತ್ರದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ.

key words: rain- Declaration -leave – two taluk- school-colleges – Mysore district.