Tuesday, September 22, 2026

BDA Apartments

ದಕ್ಷಿಣ ಆಫ್ರಿಕಾ ಟೆಸ್ಟ್ ಅಭ್ಯಾಸ ಪಂದ್ಯಕ್ಕೆ ಮಳೆ ಅಡ್ಡಿ BDA JK_Adv BDA Adv
Home Front Page ದಕ್ಷಿಣ ಆಫ್ರಿಕಾ ಟೆಸ್ಟ್ ಅಭ್ಯಾಸ ಪಂದ್ಯಕ್ಕೆ ಮಳೆ ಅಡ್ಡಿ

ದಕ್ಷಿಣ ಆಫ್ರಿಕಾ ಟೆಸ್ಟ್ ಅಭ್ಯಾಸ ಪಂದ್ಯಕ್ಕೆ ಮಳೆ ಅಡ್ಡಿ

ಬೆಂಗಳೂರು, ಸೆಪ್ಟೆಂಬರ್ 26, 2019 (www.justkannada.in): ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಧ್ಯೆ ಅಕ್ಟೋಬರ್ 2 ರಿಂದ ಮೊದಲ ಟೆಸ್ಟ್​ ಪಂದ್ಯ ಆರಂಭವಾಗಲಿದೆ.

ಇದಕ್ಕೂ ಮೊದಲು ಪ್ರವಾಸಿ ಆಫ್ರಿಕಾ ಭಾರತ ಮಂಡಳಿ ಅಧ್ಯಕ್ಷರ ಇಲೆವೆನ್ ವಿರುದ್ಧ ಮೂರು ದಿನಗಳ ಅಭ್ಯಾಸ ಪಂದ್ಯಕ್ಕೆ ಸಜ್ಜಾಗಿದೆ.

ವಿಜಯನಗರಂನ ಡಾ. ಪಿವಿಜಿ ರಾಜು ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಆದರೆ, ಪಂದ್ಯ ಆರಂಭಕ್ಕೆ ವರುಣ ಅಡ್ಡಿ ಪಡಿಸಿದ್ದು ಟಾಸ್ ಪ್ರಕ್ರಿಯೆ ಮುಂದೂಡಲಾಗಿದೆ.

ಮಂಡಳಿ ಅಧ್ಯಕ್ಷರ ಇಲೆವೆನ್ ತಂಡವನ್ನು ರೋಹಿತ್ ಶರ್ಮಾ ನಾಯಕನಾಗಿ ಮುನ್ನಡೆಸಲಿದ್ದಾರೆ. ಜೊತೆಗೆ ಮಯಾಂಕ್ ಅಗರ್ವಾಲ್ ಜೊತೆ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.

ಸುಮಾರು 9 ತಿಂಗಳ ಬಳಿಕ ರೋಹಿತ್ ಟೆಸ್ಟ್​ ಕ್ರಿಕೆಟ್​ಗೆ ಮರಳಿದ್ದು ಸಾಕಷ್ಟು ನಿರೀಕ್ಷೆ ಇಡಲಾಗಿದೆ. 2018ರ ಡಿಸೆಂಬರ್​​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ರೋಹಿತ್​​ ಕೊನೆಯದಾಗಿ ಟೆಸ್ಟ್​ ಪಂದ್ಯವನ್ನು ಆಡಿದ್ದರು.