ರಾಜ್ಯಾದ್ಯಂತ ನಾಲ್ಕು ದಿನಗಳ ಕಾಲ ಮಳೆ ಮುನ್ಸೂಚನೆ: ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು, ಮೇ, 1,2025 (www.justkannada.in): ಬೆಂಗಳೂರು ಸೇರಿ ರಾಜ್ಯಾದ್ಯಂತ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಹಲವು  ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈಗಾಗಲೇ ಕಳೆದ ಎರಡು ವಾರಗಳಿಂದ ನಾನಾ ಕಡೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು , ನಿನ್ನೆ ರಾತ್ರಿ ಬೆಂಗಳೂರು ಮೈಸೂರು ಮಂಡ್ಯ ಸೇರಿ ಹಲವು ಕಡೆಗಳಲ್ಲಿ ವರುಣ ಅಬ್ಬರಿಸಿದ್ದಾನೆ. ಈ ಮಧ್ಯೆ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆ  ನೀಡಿದೆ.

ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.

ಬೆಂಗಳೂರು ಬೆಂಗಳೂರು ಗ್ರಾಮಾಂತರ, ಕೋಲಾರ ಚಿಕ್ಕಬಳ್ಳಾಪುರ, ತುಮಕೂರು ಚಿತ್ರದುರ್ಗ ಶಿವಮೊಗ್ಗ ಮೈಸೂರು, ಮಂಡ್ಯ,  ಚಿಕ್ಕಮಗಳೂರು ಚಾಮರಾಜನಗರ ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ  ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Key words: Rain, forecast, four days, state: Yellow alert