ಮಧ್ಯಾಹ್ನದ ನಂತರ ಮತದಾನಕ್ಕೆ ಮಳೆ ಅಡ್ಡಿ ಸಾಧ್ಯತೆ: ಈಗಲೇ ಹೋಗಿ ವೋಟ್ ಮಾಡಿ!

ಬೆಂಗಳೂರು, ಮೇ 10, 2023 (www.justkannada.in): ಕರ್ನಾಟಕದಲ್ಲಿ ಇಂದು ವಿಧಾನಸಭೆ ಚುನಾವಣೆ ಮತದಾನ ನಡೆಯುತ್ತಿದ್ದು, ಚುನಾವಣೆಗೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ.

ಭಾರತೀಯ ಹವಾಮಾನ ಇಲಾಖೆ ತಜ್ಞರ ಪ್ರಕಾರ, ರಾಜ್ಯದ ದಕ್ಷಿಣ ಭಾಗದ ಹಲವು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ತಿಳಿಸಿದೆ.