ರಾಜ್ಯದಲ್ಲಿ ಮುಂದಿನ ಮೂರು ದಿನಗಳ  ಕಾಲ ಮಳೆ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ.

ಬೆಂಗಳೂರು,ನವೆಂಬರ್,3,2022(www.justkannada.in): ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ,  ಕರಾವಳಿ ಭಾಗದಲ್ಲಿ ಹೆಚ್ಚಾಗಿ ಮಳೆರಾಯ ಅಬ್ಬರಿಸಲಿದ್ದಾನೆ.  ಬೆಂಗಳೂರು ಕೊಡಗು ಶಿವಮೊಗ್ಗ ಕೋಲಾರ ಸೇರಿ ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ.

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ ಮೂರು ದಿನ ಭಾರೀ ಮಳೆ ಯಾಗುವ ಸಾಧ್ಯತೆಯಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ ನ. 6ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ನವೆಂಬರ್ 6 ರವರೆಗೆ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು, ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಶಿವಮೊಗ್ಗ, ಕೋಲಾರ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

Key words: Rain -next -three days – state