Sunday, August 23, 2026

BDA Apartments

Home Front Page ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ…

ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ…

ಬೆಂಗಳೂರು,ಆ,11,2020(www.justkannada.in):  ರಾಜ್ಯಾಧ್ಯಂತ ಕಳೆದ ಒಂದು ವಾರ ಮಳೆ ಅಬ್ಬರಿಸಿ  ಪ್ರವಾಹ ಸ್ಥಿತಿ ನಿರ್ಮಾಣ ಮಾಡಿತ್ತು. ಇದೀಗ ಮತ್ತೆ ಮಳೆಯಾಗುವ ಬಗ್ಗೆ ರಾಜ್ಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ ಉತ್ತರ ಕನ್ನಡ, ಹಾಸನ ಶಿವಮೊಗ್ಗ, ಕೊಡಗು ಸೇರಿದಂತೆ ಹಲವು ಭಾಗಗಳಲ್ಲಿ ಮತ್ತೆ ಮಳಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎರಡು ದಿನ ಭಾರೀ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆ ಸುರಿಯಲಿದೆ. ಮಲೆನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂಬುದಾಗಿ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Rain – state-again.- Meteorological -Department

ಇನ್ನೂ ಉತ್ತರ ಕರ್ನಾಟಕ ಭಾಗದಲ್ಲೂ ಸಾಧಾರಣ ಮಳೆಯಾಗಲಿದೆ. ಬೆಳಗಾವಿ, ರಾಯಚೂರು, ಬೀದರ್ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ.

Key words: Rain – state-again.- Meteorological -Department