Tuesday, August 11, 2026

BDA Apartments

Home Front Page ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಇಂದಿನಿಂದ 15ರವರೆಗೆ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಇಂದಿನಿಂದ 15ರವರೆಗೆ ಮಳೆ ಸಾಧ್ಯತೆ

ಬೆಂಗಳೂರು, ಡಿಸೆಂಬರ್ 12, 2021 (www.justkannada.in): ಕರ್ನಾಟಕದ ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ತುಮಕೂರು, ರಾಮನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಡಿ.15ರವರೆಗೆ ಮಳೆ ಸುರಿಯಲಿದೆ.

ಇಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ, ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ವಾಯುಭಾರ ಕುಸಿತವಾಗಿರುವುದರಿಂದ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ರಾಮನಗರ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು.