Tuesday, September 29, 2026

BDA Apartments

Home Front Page ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ನಾಳೆ, ನಾಡಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ನಾಳೆ, ನಾಡಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು, ಮಾರ್ಚ್ 06, 2022 (www.justkannada.in): ಮಾರ್ಚ್ 7 ಹಾಗೂ 8ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ.

ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾರ್ಚ್ 7ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತು ಮಾರ್ಚ್ 8ರಂದು ಉತ್ತರ ಒಳನಾಡಿದನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.